ಓವೈಸಿ ಕಾರಿನ ಮೇಲೆ ಗುಂಡು ಹಾರಿಸಿದ್ದ ಆರೋಪಿ ಹಾಗೂ ಪಿಸ್ತೂಲ್ ಸರಬರಾಜು ಮಾಡಿದ್ದವನ ಬಂಧನ

ಲಖ್ನೋ,ಫೆ.5- ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರ ಕಾರಿನ ಮೇಲೆ ಗುಂಡು ಹಾರಿಸಿದ ಇಬ್ಬರು ವ್ಯಕ್ತಿಗಳ ಪೈಕಿ ಒಬ್ಬ ಆರೋಪಿ ಉತ್ತರಪ್ರದೇಶದ ಮೀರತ್‍ನಲ್ಲಿ ವ್ಯಕ್ತಿಯೊಬ್ಬನಿಂದ ಪಿಸ್ತೂಲು ಪಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡು ಹಾರಿಸಿದ್ದ ನೋಯ್ಡಾ ನಿವಾಸಿ ಸಚಿನ್ ಹಾಗೂ ಶುಭಂ ಎಂಬುವವರನ್ನು ಬಂಧಿಸಲಾಗಿದೆ. ಆರೋಪಿ ಸಚಿನ್ ಉತ್ತರಪ್ರದೇಶದ ಮೀರತ್ ಜಿಲ್ಲೆಯ ತಲೀಂ ಎಂಬಾತನಿಂದ ಪಿಸ್ತೂಲ್ ಪಡೆದುಕೊಂಡಿದ್ದಾನೆ ಎಂಬುದು ಪೊಲೀಸರ ವಿಚಾರಣೆಯಿಂದ ತಿಳಿದುಬಂದಿದೆ. ಬಂಧಿತನಿಂದ 9 ಎಂಎಂ ಪಿಸ್ತೂಲ್‍ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಶಸ್ತ್ರಾಸ್ತ್ರಗಳನ್ನು […]