ಎರಡು ತಿಂಗಳಲ್ಲಿ ಹುಣಸೂರು ಆಸ್ಪತ್ರೆ ಉದ್ಘಾಟನೆ: ಸಚಿವ ಸುಧಾಕರ್

ಬೆಳಗಾವಿ,ಡಿ.29-ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ನೂರು ಹಾಸಿಗೆಗಳ ಸಾಮಥ್ರ್ಯದ ಸಾರ್ವಜನಿಕ ಆಸ್ಪತ್ರೆ ಇನ್ನೇಡು ತಿಂಗಳೊಳಗೆ ಸಿದ್ಧವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ವಿಧಾನಸಭೆಗೆ ತಿಳಿಸಿದರು. ಶಾಸಕ ಮಂಜುನಾಥ್ ಎಚ್.ಪಿ. ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಆಸ್ಪತ್ರೆ ಹಿಂದೆಯೇ ಉದ್ಘಾಟನೆಗೊಳ್ಳಬೇಕಿತ್ತು. ಆದರೆ, ಹೆಚ್ಚುವರಿ ಕಾಮಗಾರಿ ನಡೆಸುತ್ತಿರುವ ಕಾರಣ ವಿಳಂಬವಾಗಿದೆ. 9.95ಕೋಟಿ ಪರಿಷ್ಕøತ ಅಂದಾಜು ಮೊತ್ತದ ಅನುಮೋದನೆ ನೀಡುವಂತೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಕಳುಹಿಸಲಾಗಿದೆ. ಅಲ್ಲಿಂದ ಅನುಮತಿ ಸಿಕ್ಕರೆ ಸಚಿವ ಸಂಪುಟ […]

2 ತಿಂಗಳಲ್ಲಿ 1 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿ

ಬೆಳಗಾವಿ, ಡಿ.22- ಮುಂದಿನ ಬಜೆಟ್ ಅಧಿವೇಶನದ ವೇಳೆಗೆ ಬರೋಬ್ಬರಿ ಒಂದು ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ವಿಧಾನ ಪರಿಷತ್ತಿಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಸಿ.ಎನ್.ಮಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ರಾಜ್ಯದಲ್ಲಿ ವಿವಿಧ ಇಲಾಖೆಗಳ ವಿವಿಧ ವೃಂದದ 7.60ಲಕ್ಷ ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ ಈಗಾಗಲೇ 5.11ಲಕ್ಷ ಹುದ್ದೆಗಳು ಭರ್ತಿಯಾಗಿದವೆ. ಇನ್ನೂ ಉಳಿದ 2.50 ಲಕ್ಷ ಹುದ್ದೆಗಳ ಖಾಲಿ ಇವೆ. ಈ ಹುದ್ದೆಗಳ ಭರ್ತಿ ಪ್ರಕ್ರಿಯೆ ಭಾಗವಾಗಿ […]