“ತುಮಕೂರು ರಸ್ತೆ ಮೇಲ್ಸೇತುವೆ ಮೇಲೆ ದ್ವಿಚಕ್ರ ವಾಹನ, ಲಘು ವಾಹನ ಸಂಚಾರಕ್ಕೆ ಅವಕಾಶ ಕೊಡಿ”
ಬೆಂಗಳೂರು, ಫೆ.15- ತುಮಕೂರು ರಸ್ತೆಯ ಗೊರಗುಂಟೆ ಪಾಳ್ಯ ಮತ್ತು ನಾಗಸಂದ್ರ ನಡುವಿನ ಮೇಲ್ಸೇತುವೆ ರಸ್ತೆಯಲ್ಲಿ ದ್ವಿಚಕ್ರ ವಾಹನ ಮತ್ತು ಲಘು ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ಎಸ್.ಸುರೇಶ್‍ಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ. ಕಳೆದ ಎರಡು ತಿಂಗಳಿನಿಂದ ಈ ಭಾಗದಲ್ಲಿ ವಾಹನ ಸಂಚಾರ ದಟ್ಟಣೆಯಿಂದ ಸಾಕಷ್ಟು ಸಮಸ್ಯೆಯಾಗಿದೆ. ಇದರ ಬಗ್ಗೆ ಕಳೆದ ಜ.20ರಂದು ನಾನು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ದುರಸ್ತಿ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ […]