ಸುಪ್ರೀಂ ಕೋರ್ಟ್ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಯು.ಯು.ಲಿಲಿತ್ ಅಧಿಕಾರ ಸ್ವೀಕಾರ

ನವದೆಹಲಿ,ಆ.27- ಸರ್ವೋಚ್ಛ ನ್ಯಾಯಾಲಯದ 49ನೇ ಮುಖ್ಯ ನ್ಯಾಯಮೂರ್ತಿಗಳಾಗಿ ಉದಯ್ ಉಮೇಶ್ ಲಲಿತ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ರಾಷ್ಟ್ರಪತಿ ಭವನದ ದರ್ಬಾರ್ ಹಾಲ್‍ನಲ್ಲಿ ನಡೆದ ಸಮಾರಂಭದಲ್ಲಿ ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕಾರ ಗೌಪ್ಯತೆಯನ್ನು ಬೋಧಿಸಿದರು. ಸತ್ಯ, ನ್ಯಾಯ, ನಿಷ್ಠೆ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿ ಹಿಡಿಯುವ ಪ್ರತಿಜ್ಞೆಯನ್ನು ಅವರು ಮಾಡಿದರು.ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿದ್ದ ಎನ್.ವಿ.ರಮಣ ಅವರ ಅಧಿಕಾರ ಅವಧಿ ನಿನ್ನೆಗೆ ಮುಗಿದ್ದಿತ್ತು. ತೆರವಾಗಿದ ಈ ಸ್ಥಾನಕ್ಕೆ ಹಿರಿಯ ನ್ಯಾಯಮೂರ್ತಿ ಉದಯ್ ಲಲಿತ್ ಅವರನ್ನು […]