ಕರ್ನಾಟಕದಲ್ಲೂ ಏಕರೂಪ ನಾಗರಿಕ ಸಂಹಿತೆ ಜಾರಿ..?

ಬೆಂಗಳೂರು,ಅ.30- ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊಸ್ತಿಲಲ್ಲೇ ಮತ್ತೊಂದು ಹೊಸ ಅಸ್ತ್ರ ಪ್ರಯೋಗಿಸಲು ಮುಂದಾಗಿರುವ ಆಡಳಿತಾರೂಢ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡಲು ಮುಂದಾಗಿದೆ. ಈಗಾಗಲೇ ಉತ್ತರಖಂಡ್‍ನಲ್ಲಿ ಈ ಕಾಯ್ದೆ ಅನುಷ್ಠಾನವಾಗಿದ್ದು, ವಿಧಾನಸಭೆ ಚುನಾವಣೆ ನಡೆಯುತ್ತಿರುವ ಹಿಮಾಚಲ ಪ್ರದೇಶ ಹಾಗೂ ಗುಜರಾತ್‍ನಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡಲು ಅಲ್ಲಿನ ಸರ್ಕಾರಗಳು ಮುಂದಾಗಿವೆ. ಇದರ ಬೆನ್ನಲ್ಲೇ ಕರ್ನಾಟಕ ಸರ್ಕಾರವು ಈ ಮಸೂದೆಯನ್ನು ಡಿಸೆಂಬರ್‍ನಲ್ಲಿ ನಡೆಯಲಿರುವ ಬೆಳಗಾವಿ ಅಧಿವೇಶನದಲ್ಲಿ ಮಂಡನೆ ಮಾಡಲು ಚಿಂತನೆ ನಡೆಸಿದ್ದು, ಕೇಂದ್ರ […]