ಶಿಕ್ಷಣ ಸಂಸ್ಥೆಗಳಲ್ಲಿ ಇಜಾಬ್, ಕೇಸರಿಶಾಲ್ ಧರಿಸಬಾರದು : ಗೃಹ ಸಚಿವ ಜ್ಞಾನೇಂದ್ರ

ಬೆಂಗಳೂರು,ಫೆ.3-ಶಿಕ್ಷಣ ಸಂಸ್ಥೆಗಳು ನಿಗದಿಪಡಿಸಿರುವ ಸಮವಸ್ತ್ರ ಹೊರತುಪಡಿಸಿ ಕೇಸರಿ ಶಾಲಾಗಲಿ, ಇಜಾಬ್ ಆಗಲಿ ಧರಿಸಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ವಿಧಾನಸೌಧದ ಮುಂಭಾಗ ರಾಜ್ಯ ವಿಪತ್ತು ಸ್ಪಂದನಾಪಡೆಯ ನೂತನ ವಾಹನಗಳ ಲೋಕಾರ್ಪಣೆ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಗಳಲ್ಲಿ ವಿವಾದ ಬೇಡ. ಮತೀಯತೆ ಬಿಟ್ಟು ವಿಶಾಲ ಮನೋಭಾವವಿರಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರವೇ ಕಡ್ಡಾಯವೇ ಹೊರತು ಬೇರೇನೂ ಅಲ್ಲ. ಶಿಕ್ಷಣ ಸಂಸ್ಥೆಯಲ್ಲಿ ಧರ್ಮ, ಜಾತಿ ಮೀರಿ ಎಲ್ಲರೂ ಒಂದೇ ಎಂಬ ಭಾವನೆ, ಭಾರತ […]