ಉಕ್ರೇನಲ್ಲಿರುವ ವಿದ್ಯಾರ್ಥಿಗಳ ರಕ್ಷಣೆಗೆ ಅಗತ್ಯ ಕ್ರಮ : ಬಾಲಚಂದ್ರ ಜಾರಕಿಹೊಳಿ

ಮೂಡಲಗಿ,ಫೆ.26- ಯುದ್ಧ ಸನ್ನಿವೇಶ ನಿರ್ಮಾಣ ವಾಗಿರುವ ಉಕ್ರೇನ್‍ನಲ್ಲಿ ಮೂಡಲಗಿ ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಬೆಳಗಾವಿ ಜಿಲ್ಲಾಯ ಏಳು ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರಲು ಸಕಲ ವ್ಯವಸ್ಥೆ ಮಾಡುವಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದ್ದು, ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯುದ್ಧ ರಾಷ್ಟ್ರದಲ್ಲಿ ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿರುವುದರಿಂದ ವಿದ್ಯಾರ್ಥಿಗಳ ಪೋಷಕರು ಆತಂಕಗೊಂಡಿದ್ದಾರೆ. ಅದರಂತೆಯೇ ಮೂಡಲಗಿ […]