“ನಾಗ್ಪುರ ಶಿಕ್ಷಣ ನೀತಿ”ಯನ್ನು ರದ್ದುಗೊಳಿಸಲು ಸಿದ್ದ : ಡಿಕೆಶಿ

ಬೆಂಗಳೂರು,ಮಾ.2- ಕಡಿಮೆ ಅಂಕ ಪಡೆದವರು ವಿದೇಶಕ್ಕೆ ಓದಲು ಹೋಗಿದ್ದಾರೆ ಎಂದು ಹೇಳುವ ಮೂಲಕ ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ವಿದ್ಯಾರ್ಥಿಗಳ ಸ್ವಾಭಿಮಾನಕ್ಕೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಗ್ಪುರದ ಶಿಕ್ಷಣ ನೀತಿಯನ್ನು ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರದ್ದುಗೊಳಿಸುವುದಾಗಿ ಭರವಸೆ ನೀಡಿದ್ದಾರೆ. ಭಾರತದಲ್ಲಿ ಶಿಕ್ಷಣ ವ್ಯವಸ್ಥೆ ಅತ್ಯುತ್ತಮವಾಗಿದೆ ಬೇರೆ ದೇಶಗಳಿಂದ ಓದಲು ವಿದ್ಯಾರ್ಥಿಗಳು ಇಲ್ಲಿಗೆ ಬರುತ್ತಿದ್ದಾರೆ. […]