ಪ್ರಜಾಪ್ರಭುತ್ವ ದುರ್ಬಲಗೊಳಿಸುವ ಬಿಜೆಪಿ ಯತ್ನ ಫಲಿಸುವುದಿಲ್ಲ: ಕಾಂಗ್ರೆಸ್

ನವದೆಹಲಿ,ಮಾ.2- ಭಾರತದ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ದುರ್ಬಲಗೊಳಿಸುವ ಬಿಜೆಪಿಯ ಯಾವುದೇ ಪಿತೂರಿ ಯಶಸ್ವಿಯಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ. ಪ್ರಧಾನ ಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿಯ ಸಲಹೆಯ ಮೇರೆಗೆ ರಾಷ್ಟ್ರಪತಿಗಳು ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರ ನೇಮಕಾತಿಗಳನ್ನು ಮಾಡುತ್ತಾರೆ ಎಂದು ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ನೀಡಿದ ಬಳಿಕ ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ವಿರುದ್ಧ ಬಿಜೆಪಿಯ ಹುನ್ನಾರಗಳ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ […]