ಕೋರ್ಟ್ ತೀರ್ಪು ಬರುವವರೆಗೂ ಸಮವಸ್ತ್ರ ನೀತಿ ಪಾಲನೆ ಮಾಡಿ : ಶಿಕ್ಷಣ ಸಚಿವ ನಾಗೇಶ್

ಬೆಂಗಳೂರು,ಫೆ.9- ನ್ಯಾಯಾಲಯದ ತೀರ್ಪು ಬರುವವರೆಗೂ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ಕಡ್ಡಾಯವಾಗಿ ಸಮವಸ್ತ್ರ ನೀತಿಯನ್ನು ಪಾಲನೆ ಮಾಡಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನವಿ ಮಾಡಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬರು ಹಿಜಾಬ್ ಬೇಕು ಎನ್ನುತ್ತಾರೆ. ಮತ್ತೊಬ್ಬರು ಕೇಸರಿ ಶಾಲು ಬೇಕು ಎನ್ನುತ್ತಾರೆ. ಅವರವರ ಇಷ್ಟಕ್ಕೆ ತಕ್ಕಂತೆ ಶಿಕ್ಷಣ ಸಂಸ್ಥೆಗಳಲ್ಲಿ ಉಡುಪು ತೊಡಲು ಅವಕಾಶವಿಲ್ಲ. ಆಡಳಿತ ಮಂಡಳಿ ಏನು ನಿರ್ಧರಿಸುತ್ತದೆಯೋ ಅದನ್ನು ಪಾಲನೆ ಮಾಡಲೇಬೇಕೆಂದು ಹೇಳಿದರು. ವಿದ್ಯಾರ್ಥಿಗಳ ನಡುವೆ ಅಸಮಾನತೆ ಉಂಟಾಗದಂತೆ ಪ್ರತಿಯೊಬ್ಬರಲ್ಲೂ ಸಮಾನತೆ ಬೆಳೆಯಬೇಕು ಎಂಬ […]