ಅವಿವಾಹಿತ ಮಹಿಳೆಯರನ್ನು ಪುಸಲಾಯಿಸಿ ಬ್ಲಾಕ್ ಮೇಲ್: ಆರೋಪಿ ಅರೆಸ್ಟ್

ಬೆಂಗಳೂರು, ಫೆ.4- ಅವಿವಾಹಿತ ಮಹಿಳೆಯರನ್ನು ಸಾಮಾಜಿಕ ಜಾಲತಾಣದ ಮುಖಾಂತರ ಪರಿಚಯ ಮಾಡಿಕೊಂಡು ಅವರ ಅನುಮತಿಯಿಲ್ಲದೆ ಖಾಸಗಿ ಫೋಟೋಗಳನ್ನು ತೆಗೆದು ಲಕ್ಷಾಂತರ ಹಣ ನೀಡುವಂತೆ ಬೆದರಿಕೆ ಹಾಕುತ್ತಿದ್ದ ಚತ್ತೀಸ್ಘಡ ರಾಜ್ಯದ ಆರೋಪಿಯನ್ನು ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಭಿಷೇಕ್ ಅಲಿಯಾಸ್ ಸುಶಾಂತ್ ಜೈನ್ (33) ಬಂಧಿತ ಆರೋಪಿ. ಈತನಿಂದ 3 ಮೊಬೈಲ್ ಹಾಗೂ 3.60 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ. ಈತ ಸಾಫ್ಟ್ವೇರ್ ಕಂಪೆನಿಯೊಂದನ್ನು ತೆರೆಯಲು ತಯಾರಿ ಮಾಡಿಕೊಳ್ಳುತ್ತಿದ್ದನು. ಆರೋಪಿ ಅಭಿಷೇಕ್ಗೆ ವಿವಾಹವಾಗಿ ಪತ್ನಿ, ಮಕ್ಕಳಿದ್ದರೂ ಸಹ ಟೆಂಡರ್ ಎಂಬ […]