ನಿಷ್ಪಕ್ಷಪಾತವಾಗಿ ಕಾನೂನು ಕಾಪಾಡಿ : ಪ್ರತಾಪ್ ರೆಡ್ಡಿ

ಬೆಂಗಳೂರು,ಮಾ.14- ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಜವಾಬ್ದಾರಿಯುತ ವಾಗಿ ಕರ್ತವ್ಯ ನಿರ್ವಹಿಸುವ ಜೊತೆಗೆ ನಿಷ್ಪಕ್ಷಪಾತವಾಗಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರು ನಗರದ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ನಗರ ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿಂದು ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡುತ್ತಾ, ಚುನಾವಣೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಿದರು. ಇನ್‍ಸ್ಪೆಕ್ಟರ್‍ಗಳು ತಮ್ಮ ತಮ್ಮ ಠಾಣೆ ವ್ಯಾಪ್ತಿಗಳಲ್ಲಿ ರೌಡಿ ಚಟುವಟಿಕೆಗಳ […]
ತಳಮಟ್ಟದಲ್ಲಿ ಪಕ್ಷ ಪ್ರಬಲವಾಗಿದೆ, ಮತ್ತೆ ಅಧಿಕಾರಕ್ಕೇರುತ್ತೇವೆ : ಬೊಮ್ಮಾಯಿ

ಹುಬ್ಬಳ್ಳಿ,ಮಾ.10- ಬಿಜೆಪಿಗೆ ಬರಲಿರುವ ವಿಧಾನಸಭೆ ಚುನಾವಣೆ ಯಲ್ಲಿ ಸ್ಪಷ್ಟ ಜನಾದೇಶ ದೊರಕಲಿದ್ದು, ಕಾಂಗ್ರೆಸ್‍ಗೆ ಸಮೀಕ್ಷೆಯಲ್ಲಿ 65 ಸೀಟ್‍ಗಳು ಬರಬಹುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಮಾಡಿರುವ ಕೆಲಸಗಳು ಜನರಿಗೆ ತಲುಪಿದೆ. ಹೀಗಾಗಿ ಜನರು ನಮಗೆ ಆಶೀರ್ವಾದ ಮಾಡಲಿದ್ದಾರೆ. ಡಿ.ಕೆ.ಶಿವಕುಮಾರ್ ಸಮೀಕ್ಷೆ ಪ್ರಕಾರ ಕಾಂಗ್ರೆಸ್‍ಗೆ ಹೆಚ್ಚೆಂದರೆ 65 ಕ್ಷೇತ್ರಗಳಲ್ಲಿ ಗೆಲುವು ದೊರೆಯಬಹುದು ಎಂದು ವ್ಯಂಗ್ಯವಾಡಿದರು. ಚುನವಾಣೆಗೆ ನಮ್ಮದು ಮೂರನೆ ಹಂತದ ಸಿದ್ದತೆ ನಡೆಯುತ್ತದೆ. […]
ಬಿಜೆಪಿ ಹಾಲಿ ಶಾಸಕರಿಗೆ ಟಿಕೆಟ್ ಫಿಕ್ಸ್ : ಯಡಿಯೂರಪ್ಪ

ಕಲಬುರಗಿ,ಮಾ.7- ಹಾಲಿ 4ರಿಂದ 6 ಆರು ಶಾಸಕರನ್ನು ಹೊರತುಪಡಿಸಿದರೆ ಬಹುತೇಕ ಎಲ್ಲರಿಗೂ ಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಹಾಲಿ ಬೆರಳೆಣಿಕೆಯ ಶಾಸಕರನ್ನು ಹೊರತುಪಡಿಸಿದರೆ ಬಹುತೇಕ ಎಲ್ಲರಿಗೂ ಟಿಕೆಟ್ ಸಿಗಲಿದೆ. ಸಮಯ ಮತ್ತು ಪರಿಸ್ಥಿತಿ ನೋಡಿಕೊಂಡು ಕೇಂದ್ರ ವರಿಷ್ಠರು ರಾಜ್ಯ ಘಟಕದ ನಾಯಕರ ಜೊತೆ ಚರ್ಚಿಸಿ ಟಿಕೆಟ್ ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಿದರು. ಯಾರಿಗೆ ಯಾವ ಕ್ಷೇತ್ರದಿಂದ ಟಿಕೆಟ್ ನೀಡಬೇಕೆಂಬುದನ್ನು ವರಿಷ್ಠರು ತೀರ್ಮಾನಿಸುತ್ತಾರೆ. […]
ಹುಬ್ಬಳ್ಳಿಗೆ ಅಮಿತ್ ಷಾ: ಚುನಾವಣೆ ಕಾರ್ಯತಂತ್ರಕ್ಕೆ ಸರಣಿ ಸಭೆ

ಬೆಂಗಳೂರು,ಜ.27- ಕಲ್ಯಾಣ ಕರ್ನಾಟಕದಲ್ಲಿ ಪಕ್ಷವನ್ನು ಮತ್ತಷ್ಟು ಭದ್ರಪಡಿಸಿ ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಲು ಕೇಂದ್ರ ಗೃಹಸಚಿವ ಅಮಿತ್ ಷಾ ಸಂಜೆ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ತಮ್ಮ ಎರಡು ದಿನಗಳ ರಾಜ್ಯ ಪ್ರವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಸಚಿವರು ಮತ್ತಿತರರನ್ನು ಭೇಟಿಯಾಗಿ ಚುನಾವಣೆಗೆ ಕಾರ್ಯತಂತ್ರಗಳನ್ನು ರೂಪಿಸಲಿದ್ದಾರೆ. ಕೆಲ ದಿನಗಳ ಹಿಂದೆ ರಾಜ್ಯಕ್ಕೆ ಭೇಟಿ ಕೊಟ್ಟಿದ್ದ ಅಮಿತ್ ಷಾ ಮಂಡ್ಯ ಮತ್ತು ಬೆಂಗಳೂರಿನಲ್ಲಿ ಪ್ರತ್ಯೇಕವಾಗಿ ಸಭೆ ನಡೆಸುವ ಮೂಲಕ ಕಾರ್ಯಕರ್ತರಲ್ಲಿ […]
ನಾಗಾಲ್ಯಾಂಡ್‍ನಲ್ಲಿ ಎಎಪಿ ಏಕಾಂಗಿ ಸ್ಪರ್ಧೆ

ಕೋಹಿಮಾ,ಜ.26-ಮುಂಬರುವ ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ಸಾಧ್ಯವಾದಷ್ಟು ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ರ್ಪಧಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ರಾಜೇಶ್ ಶರ್ಮ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಮಾಜಿ ಶಾಸಕ ಆಶು ಕೇಹೋ ಅವರನ್ನು ನಾಗಾಲ್ಯಾಂಡ್‍ನ ಎಎಪಿ ಪಕ್ಷದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಘೋಷಿಸಿದರು. 60 ಕ್ಷೇತ್ರಗಳನ್ನೊಳಗೊಂಡಿರುವ ನಾಗಾಲ್ಯಾಂಡ್ ವಿಧಾನಸಭಾ ಕ್ಷೇತ್ರಗಳಿಗೆ ಬರುವ ಫೆ.27ರಂದು ಚುನಾವಣೆ ನಡೆಯಲಿದೆ. ಇದೇ ಮೊದಲ ಬಾರಿಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಹಾರಾಡಿದ ತಿರಂಗಾ […]