ಐಎಎಸ್ ನೇಮಕಾತಿಯಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ..?

ನವದೆಹಲಿ, ಫೆ.3- ದೇಶದಲ್ಲಿ ಎದುರಾಗಿರುವ ಐಎಎಸ್ ಅಧಿಕಾರಿಗಳ ಕೊರತೆಯನ್ನು ನಿಗಿಸಲು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‍ಸಿ) ಪರೀಕ್ಷೆ ಬದಲಾಗಿ, ಸಿಎಸ್‍ಇ ಸೇರಿದಂತೆ ಪರ್ಯಾಯ ಪದ್ಧತಿಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ, ಪಿಂಚಣಿ ಇಲಾಖೆಯಯ ಹೊಣೆಗಾರಿಕೆ ಹೊಂದಿರುವ ಪ್ರಧಾನಿ ಅವರು ರಾಜ್ಯಸಭೆಯಲ್ಲಿ ಕಾಂಗ್ರೆಸ್‍ನ ಸದಸ್ಯ ಕೆ.ಸಿ.ವೇಣುಗೋಪಾಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ್ದಾರೆ. ಸರ್ಕಾರ ಆಂತರಿಕ ಪರ್ಯಾಯ ಸಾಧ್ಯತೆಗಳ ಪರಿಶೀನೆಗೆ ಸಮಿತಿಯೊಂದನ್ನು ರಚನೆ ಮಾಡಿದೆ. […]