“ಉರಿಗೌಡ-ನಂಜೇಗೌಡ ವಿಚಾರ ಮಾತನಾಡಬೇಡಿ”

ಬೆಂಗಳೂರು,ಮಾ.20- ಸಮುದಾಯದ ಭಾವನೆಗಳಿಗೆ ಧಕ್ಕೆ ತಾರದೆ ತಕ್ಷಣವೇ ಉರಿಗೌಡ, ನಂಜೇಗೌಡ ಕಾಲ್ಪನಿಕ ಪಾತ್ರದ ಕುರಿತು ಯಾರೊಬ್ಬರು ಮಾತನಾಡಬಾರದು ಎಂದು ಆದಿಚುಂಚನಗಿರಿ ಪೀಠದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡುವ ಕೆಲಸಗಳನ್ನು ಯಾರೊಬ್ಬರೂ ಮಾಡಬಾರದು. ಪ್ರಸ್ತುತ ಎದ್ದಿರುವ ವಿವಾದ ಸುಖಾಂತ್ಯ ಕಾಣಬೇಕು ಎಂಬುದು ನಮ್ಮ ಆಶಯವಾಗಿದೆ. ಇಲ್ಲಿಗೆ ಈ ವಿಷಯವನ್ನು ಎಲ್ಲರೂ ಕೈಬಿಡಬೇಕೆಂದು ಶ್ರೀಗಳು ಸಲಹೆ ಮಾಡಿದರು. ಸಚಿವರಾದ ಆರ್.ಅಶೋಕ್, ಡಾ.ಅಶ್ವಥನಾರಾಯಣ, ಗೋಪಾಲಯ್ಯ, ಬಿಜೆಪಿ ರಾಷ್ಟ್ರೀಯ ಪ್ರಧಾನ […]

ಉರಿಗೌಡ-ನಂಜೇಗೌಡ ಚಿತ್ರ ನಿರ್ಮಾಣ ಕೈಬಿಟ್ಟ ಸಚಿವ ಮುನಿರತ್ನ

ಬೆಂಗಳೂರು,ಮಾ.20- ರಾಜ್ಯ ರಾಜಕಾರಣದಲ್ಲಿ ಭಾರೀ ವಿವಾದದ ಬಿರುಗಾಳಿಯನ್ನೇ ಎಬ್ಬಿಸಿದ್ದ ಉರಿಗೌಡ-ನಂಜೇಗೌಡ ಚಿತ್ರ ನಿರ್ಮಾಣದಿಂದ ಸಚಿವ ಮುನಿರತ್ನ ಹಿಂದೆ ಸರಿದಿದ್ದಾರೆ. ಮಂಡ್ಯದಲ್ಲಿ ಆದಿಚುಂಚನಗಿರಿ ಪೀಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿಯಾಗಿ ಚಿತ್ರ ನಿರ್ಮಾಣ ಸಂಬಂಧ ಮಾತುಕತೆ ನಡೆಸಿದ ಬಳಿಕ ಚಿತ್ರ ನಿರ್ಮಾಣ ಮಾಡುವ ಪ್ರಸ್ತಾವನೆಯನ್ನು ಕೈಬಿಟ್ಟಿದ್ದಾರೆ. ಶ್ರೀಗಳನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿರತ್ನ, ಉರಿಗೌಡ-ನಂಜೇಗೌಡ ವಿಚಾರದಲ್ಲಿ ಒಂದಷ್ಟು ದಾಖಲೆ ಸಿಗುತ್ತಿವೆ, ಒಂದಷ್ಟು ಸಿಗುತ್ತಿಲ್ಲ. ಯಾರ ಮನಸ್ಸು ನೋಯಿಸುವ ಉದ್ದೇಶ ನನ್ನದಲ್ಲ. ನಾನು ಈ ಸಿನಿಮಾವನ್ನು ಇಲ್ಲಿಗೆ ಕೈ ಬಿಡುತ್ತೇನೆ […]

ಉರಿಗೌಡ, ನಂಜೇಗೌಡ ವಿಚಾರದಿಂದ ಮತ ವಿಭಜನೆ ಸಾಧ್ಯವಿಲ್ಲ : ಹೆಚ್‌ಡಿಕೆ

ಬೆಂಗಳೂರು, ಮಾ.18- ಉರಿಗೌಡ, ನಂಜೇಗೌಡ ವಿಚಾರದಿಂದ ಒಕ್ಕಲಿಗರ ಮತ ವಿಭಜಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕಲಿಗ ಮತಗಳು ಭದ್ರವಾಗಿವೆ. ಯಾವ್ಯಾವ ವಿಷಯದಲ್ಲೂ ಬದಲಾವಣೆ ಮಾಡಲು ಸಾಧ್ಯವಿಲ್ಲ. ಈ ಘಟನೆಯಿಂದ ಒಕ್ಕಲಿಗರ ಮತ ಬದಲಾಗಲ್ಲ. ಇವೆಲ್ಲ ಕಾಲ್ಪನಿಕ ಕಥೆ ಎಂದು ತಿಳಿಸಿದರು. ಉರಿಗೌಡ, ನಂಜೇಗೌಡ ಇದ್ದರೋ ಇಲ್ಲವೋ ಗೊತ್ತಿಲ್ಲ. ಜೀವಂತ ಬದುಕಿರುವ ಉರಿಗೌಡ, ನಂಜೇಗೌಡರ ಬಗ್ಗೆ ಯೋಚಿಸಬೇಕು. ಈ ವಿಚಾರ ಈಗ ಅಪ್ರಸ್ತುತ ಎಂದರು. ಒಂದು ಸಮಾಜವನ್ನು ಇನ್ನೊಂದು ಸಮಾಜ […]