ಅಮೆರಿಕದಲ್ಲಿ ಕೋವಿಡ್ ಅಬ್ಬರ :ಲಕ್ಷಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ವಾಷಿಂಗ್ಟನ್,ಜ.4-ಕೋವಿಡ್ ವಿಶ್ವಾದ್ಯಂತ ಮತ್ತೊಮ್ಮೆ ಆತಂಕ ಸೃಷ್ಟಿಸುವ ಮಟ್ಟ ತಲುಪಿದ್ದು, ಕೇವಲ 4 ತಿಂಗಳಲ್ಲಿ ಗರಿಷ್ಠ ಪ್ರಕರಣಗಳು ಅಮೆರಿಕದಲ್ಲಿ ದಾಖಲಾಗಿವೆ. ಪ್ರಸ್ತುತ ಒಂದು ಲಕ್ಷಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲಾಗಿದ್ದು, 18,500 ಮಂದಿ ತೀವ್ರಾ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಮೆರಿಕದ ಆರೋಗ್ಯ ಮತ್ತು ಮಾನವ ಸೇವೆಗಳ ಇಲಾಖೆ ತಿಳಿಸಿದೆ. ಜನವರಿ 14, 2021ರಂದು ಕೋವಿಡ್ ಕಾರಣದಿಂದ ಆಸ್ಪತ್ರೆಗೆ ದಾಖಲಾದವರ ಸಂಖ್ಯೆ 1,42,000ಕ್ಕಿಂತಲೂ ಹೆಚ್ಚಾಗಿತ್ತು. ಇದಾದ ನಂತರ ಸೆಪ್ಟೆಂಬರ್ 11, 2021ರಂದು ಒಂದು ಲಕ್ಷಕ್ಕೆ ಇಳಿಕೆಯಾಗಿತ್ತು. ಅಲ್ಲಿಂದ […]