ಬಜೆಟ್ ಅನುದಾನ ಬಳಸುವಲ್ಲಿ ಮುಗ್ಗರಿಸಿದ ಬೊಮ್ಮಾಯಿ ಸರ್ಕಾರ

ಬೆಂಗಳೂರು,ಜ.24- ಪ್ರಸಕ್ತ ಸಾಲಿನ ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿದ್ದು, ಅತ್ಯಂತ ಹಿಂದುಳಿದ ತಾಲೂಕುಗಳ ಕಲ್ಯಾಣಕ್ಕಾಗಿ ರೂಪಿಸಿರುವ ವಿಶೇಷ ಅಭಿವೃದ್ಧಿ ಯೋಜನೆಯನ್ನು ಚುರುಕುಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಇನ್ನೂ ಸಾಧ್ಯವಾಗಿಲ್ಲ. ಬಜೆಟ್ ವರ್ಷ ಮುಗಿಯುತ್ತಾ ಬಂದರೂ ವಿಶೇಷ ಅಭಿವೃದ್ಧಿ ಯೋಜನೆಯ ಶೇಕಡಾವಾರಿನಲ್ಲಿ ಕಾಲು ಭಾಗವೂ ಪ್ರಗತಿ ಕಂಡಿಲ್ಲ. ಮೂರನೇ ತ್ರೈಮಾಸಿಕ ಅಂತ್ಯವಾಗಿ ಬಜೆಟ್ ವರ್ಷದ ಕೊನೆ ತ್ರೈಮಾಸಿಕ ಪ್ರಗತಿಯಲ್ಲಿದ್ದರೂ ವಿಶೇಷ ಅಭಿವೃದ್ಧಿ ಯೋಜನೆಯಡಿ ಅನುದಾನ ಬಳಕೆ ಕುಂಟುತ್ತಲೇ ಸಾಗುತ್ತಿದೆ. ಬೊಮ್ಮಾಯಿ ಸರ್ಕಾರ ವಿಶೇಷ ಅಭಿವೃದ್ಧಿ ಯೋಜನೆಯಡಿ ಕಲ್ಯಾಣ […]

ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ದೂರು ದಾಖಲು

ಬೆಂಗಳೂರು,ಅ.16- ಸಾರ್ವಜನಿಕವಾಗಿ ಹಾವಿನ ಪ್ರದರ್ಶನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಖ್ಯಾತ ಧಾರ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಅವರ ವಿರುದ್ಧ ದೂರು ದಾಖಲಾಗಿದೆ. ಇತ್ತೀಚೆಗೆ ನಡೆದ ನಾಗಮಂಟಪ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಜಗ್ಗಿ ವಾಸುದೇವ್ ಅವರು ಜೀವಂತ ಹಾವನ್ನು ಹಿಡಿದು ಸಾರ್ವಜನಿಕವಾಗಿ ಪ್ರದರ್ಶನ ಮಾಡಿದ್ದರು. ಈ ಚಿತ್ರ ಜಾಲತಾಣದಲ್ಲಿ ವೈರಲ್ ಆಗಿತ್ತು. ವನ್ಯಜೀವಿಗಳನ್ನು ಹಿಡಿದು ಸಾರ್ವಜನಿಕ ವೇದಿಕೆಗಳಲ್ಲಿ ಪ್ರದರ್ಶನ ಮಾಡುವುದು ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಸ್ಪಷ್ಟ ಉಲ್ಲಂಘನೆ ಆಗುತ್ತದೆ ಎಂದು ಆಕ್ಷೇಪಿಸಿ ಇಶಾ ಫೌಂಡೇಶನ್ ಸಂಸ್ಥಾಪಕ ಜಗ್ಗಿ ವಾಸುದೇವ್ […]