ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕನ ಸ್ಥಾನಕ್ಕೆ ಯು.ಟಿ.ಖಾದರ್ ನೇಮಕ
ಬೆಂಗಳೂರು, ಜ.30- ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರನ್ನಾಗಿ ನೇಮಿಸಲಾಗಿದೆ. ಕಾಂಗ್ರೆಸ್‍ನಲ್ಲಿ ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನ ಮಾನ ಸಿಗುತ್ತಿಲ್ಲ ಎಂದು ಆರೋಪಿಸಿ ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ತೊರೆಯಲು ಮುಂದಾಗಿದ್ದಾರೆ. ಇಬ್ರಾಹಿಂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕನ ಸ್ಥಾನದ ಆಕಾಂಕ್ಷಿಯಾಗಿದ್ದರು. ಅವರ ಬದಲು ಬಿ.ಕೆ.ಹರಿಪ್ರಸಾದ್‍ರನ್ನು ಕಾಂಗ್ರೆಸ್ ಹೈಕಮಾಂಡ್ ನೇಮಿಸಿತ್ತು. ಇದರಿಂದ ಸಿಟ್ಟಾದ ಇಬ್ರಾಹಿಂ ಅವರು ಕಾಂಗ್ರೆಸ್ ವಿರುದ್ಧ ಬಹಿರಂಗ ವಾಗ್ದಾಳಿಗೆ ಇಳಿದಿದ್ದಾರೆ. ಅದಕ್ಕೆ ಪ್ರತ್ಯುತ್ತರಿಸಲು ಅಲ್ಪಸಂಖ್ಯಾತ ಸಮುದಾಯದ […]