ಮಾನಸಿಕ ಒತ್ತಡದ ಮೂಲಕ ಶಿಕ್ಷಣ ವ್ಯವಸ್ಥೆ ಹಾಳು : ಯು.ಟಿ.ಖಾದರ್ ಆಕ್ರೋಶ

ಬೆಂಗಳೂರು, ಫೆ.20- ಕಾಂಗ್ರೆಸ್ ಸರ್ಕಾರ ಅಕಾರದಲ್ಲಿದ್ದಾಗ ಸೌಹಾರ್ದತೆಗೆ ಧಕ್ಕೆ ಬರುವ ಯಾವ ಘಟನೆಗಳು ನಡೆದಿರಲಿಲ್ಲ. ಬಿಜೆಪಿ ದುರುದ್ದೇಶದಿಂದ ಹಿಜಾಬ್ ವಿವಾದವನ್ನು ಸೃಷ್ಟಿಸಿ, ಮಾನಸಿಕ ಒತ್ತಡದ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ ಎಂದು ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್ ಆಕ್ರೋಶ ವ್ಯಕ್ತ ಪಡಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಹಿಜಾಬ್ ವಿಷಯದಲ್ಲಿ ಕಾಂಗ್ರೆಸ್ ನಿಲುವು ಸ್ಪಷ್ಟವಾಗಿದೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಬಿಜೆಪಿ ಉದ್ದೇಶ ಪೂರ್ವಕವಾಗಿ ಗೊಂದಲ ಸೃಷ್ಟಿಸುತ್ತಿದೆ ಎಂದು ಅಸಮದಾನ ವ್ಯಕ್ತ ಪಡಿಸಿದರು. ಹಿಜಾಬ್ […]

ಕಾಲೇಜಿನ ಆಡಳಿತ ಮಂಡಳಿ, ಪೋಷಕರು ಹಿಜಾಬ್ ವಿವಾದ ಬಗೆಹರಿಸಿಕೊಳ್ಳಬೇಕು : ಯು.ಟಿ.ಖಾದರ್

ಬೆಂಗಳೂರು,ಫೆ.15- ಆಯಾಯ ಕಾಲೇಜಿನ ಆಡಳಿತ ಮಂಡಳಿ, ಪೋಷಕರು ಹಿಜಾಬ್ ಕುರಿತ ವಿವಾದವನ್ನು ಬಗೆಹರಿಸಿಕೊಳ್ಳಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯು.ಟಿ.ಖಾದರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ಮಂಡಳಿ ವಿವಾದವಾಗದಂತೆ ಬಗೆಹರಿಸಿಕೊಳ್ಳಬೇಕು. ಹೊರಗಿನವರು ಆ ವಿಚಾರದಲ್ಲಿ ಮಧ್ಯಪ್ರವೇಶಿಸಬಾರದು. ವಿದ್ಯಾರ್ಥಿಗಳ ಪೋಷಕರು ತಂದೆತಾಯಿಗಳು ಈ ವಿಚಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದರು. ಬಜೆಟ್‍ನಲ್ಲಿ ಹೆಚ್ಚಿನ ಅನುದಾನ ಒದಗಿಸುವಂತೆ ಅಲ್ಪಸಂಖ್ಯಾತರ ನಿಯೋಗ ಮುಖ್ಯಮಂತ್ರಿಯನ್ನು ಭೇಟಿ ಮಾಡಲಾಗಿತ್ತು. ಶಿಕ್ಷಣ, ಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಹಿಜಾಬ್ ವಿಚಾರದಲ್ಲಿ ಸರಿಯಾದ ನಿರ್ಣಯ […]