ಮಳೆ ಆರ್ಭಟಕ್ಕೆ ಕೊಡಗಿನ ಅಯ್ಯಪ್ಪ ಬೆಟ್ಟ ಬಿರುಕು, ನೂರಾರು ಜನರ ಸ್ಥಳಾಂತರ

ಬೆಂಗಳೂರು,ಜು.16- ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಭೂ ಕುಸಿತ ಉಂಟಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ನದಿಗಳು ಉಕ್ಕಿ ಹರಿದು, ಜಲಾಶಯಗಳು ಭರ್ತಿಯಾಗಿ ಒಳಹರಿವು ಹೆಚ್ಚಾಗಿ ನದಿಪಾತ್ರದ ಜನರನ್ನು ಸ್ಥಳಾಂತರ ಮಾಡಲಾಗಿದೆ.ಹಾಸನದಿಂದ ಸಕಲೇಶಪುರ ಮಾರ್ಗದಲ್ಲಿ ದೋಣಿಗಲ್ ಸಮೀಪ ಭೂ ಕುಸಿತ ಉಂಟಾಗಿ ಶಿರಾಡಿ ಘಾಟ್ ಸಂಪರ್ಕ ಬಂದ್ ಮಾಡಲಾಗಿದೆ. ಕಳೆದ 10 ದಿನಗಳಿಂದ ಮಲೆನಾಡು ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ನದಿ, ತೊರೆ, […]

ರಾಜ್ಯದಲ್ಲಿ ನಿಲ್ಲದ ಮಳೆಯ ಅಬ್ಬರ, ಗೋಡೆ ಕುಸಿದು ತಾಯಿ-ಮಗಳು ಸಾವು

ಬೆಂಗಳೂರು, ಜು.12- ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ವರುಣನ ಆರ್ಭಟಕ್ಕೆ ಮನೆಗೋಡೆ ಕುಸಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲ್ಲೂಕಿನ ಮುರ್ಕುವಾಡ ಗ್ರಾಮದಲ್ಲಿ ರುಕ್ಮಿಣಿ ವಿಠ್ಠಲ ಮಾಚಕ್ಕ (37), ಶ್ರೀದೇವಿ ವಿಠ್ಠಲ ಮಾಚಕ್ಕ (17) ಗೋಡೆ ಕುಸಿದು ಸಾವನ್ನಪ್ಪಿದ ತಾಯಿ-ಮಗಳು. ರಾತ್ರಿ ನಿದ್ರೆ ಮಾಡುತ್ತಿದ್ದ ತಾಯಿ-ಮಗಳ ಮೇಲೆ ಬೆಳಗಿನ ಜಾವ ಗೋಡೆ ಕುಸಿದು […]