“ಓಲೈಕೆ ರಾಜಕೀಯ ಡಿಕೆಶಿಗೆ ಮುಳುವಾಗಲಿದೆ”

ಕನಕಪುರ, ಡಿ. 18- ಮಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಲ್ಪಸಂಖ್ಯಾತರ ಮತ ಗಳಿಕೆಗಾಗಿ ಬಿಜೆಪಿಯ ವಿರುದ್ದ ಜನರನ್ನು ಎತ್ತಿಕಟ್ಟಲು ಹೋಗಿ ಅಪಹಾಸ್ಯಕ್ಕೆ ಈಡಾಗಿದ್ದಾರೆ ಎಂದು ಮಾನವಹಕ್ಕುಗಳ ಜನಜಾಗೃತಿ ವೇದಿಕೆ ಅಧ್ಯಕ್ಷ ವಿ.ಬಾಬು ಆರೋಪಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು, ಮಂಗಳೂರು ಬಾಂಬ್ ಪ್ರಕರಣದಲ್ಲಿ ರಾಜ್ಯ ಪೊಲೀಸರು ಬಂಧಿಸಿರುವ ಶಂಕಿತ ಉಗ್ರನನ್ನು ಓಲೈಕೆ ಮಾಡಿಕೊಳ್ಳುವ ಭರದಲ್ಲಿ ಹೇಳಿಕೆ ನೀಡಿರುವುದು ಅವರ ರಾಜಕೀಯ ಭವಿಷ್ಯಕ್ಕೆ ಮುಂದಿನ ದಿನಗಳಲ್ಲಿ ಮುಳುವಾಗಲಿದೆ. ರಾಜ್ಯದ ದಕ್ಷ ಪೊಲೀಸರು […]