ಮೂರು ತಿಂಗಳೊಳಗೆ ಬಿಬಿಎಂಪಿಗೆ ಚುನಾವಣೆ : ಸಚಿವ ಸೋಮಣ್ಣ

ಬೆಂಗಳೂರು,ಜ.21-ಮೂರು ತಿಂಗಳೊಳಗೆ ಬಿಬಿಎಂಪಿ ಚುನಾವಣೆ ನಡೆಸಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಇಂದಿಲ್ಲಿ ತಿಳಿಸಿದರು.ಗೋವಿಂದರಾಜನಗರದ ಜ್ಞಾನಸೌಧ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪರಮಪೂಜ್ಯ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರ ಮೂರನೇ ಪುಣ್ಯಸ್ಮರಣೋತ್ಸವ ಹಾಗೂ ದಾಸೋಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಈಗಾಗಲೇ ಒಂದು ವರ್ಷ ತಡವಾಗಿರುವ ಬಿಬಿಎಂಪಿಗೆ ಮೂರು ತಿಂಗಳೊಳಗೆ ಚುನಾವಣೆ ನಡೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತುಕತೆ ನಡೆಸಲಾಗಿದ್ದು, ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳಿದರು. ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳು ಮತ್ತು ನನ್ನ ನಡುವೆ 45 ವರ್ಷಗಳ […]