ಸಚಿವಾಲಯ ಸಿಬ್ಬಂದಿಗಳಿಗೆ ಲಸಿಕೆ ಪ್ರಮಾಣ ಪತ್ರ ಕಡ್ಡಾಯ

ಬೆಂಗಳೂರು,ಜ.5-ರಾಜ್ಯದಲ್ಲಿ ಕೋವಿಡ್-19 ರೂಪಾಂತರಿ ವೈರಸ್ ಓಮಿಕ್ರಾನ್ ವೈರಾಣು ಸೋಂಕು ದಿನೇ ದಿನೇ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸಚಿವಾಲಯದ ಮುಖ್ಯಮಂತ್ರಿ ಕಚೇರಿ, ಸಚಿವರು ಮತ್ತು ಸಚಿವಾಲಯದ ಇಲಾಖೆಗಳಿಂದ ಮುಂಚಿತವಾಗಿ ನಿಗದಿಪಡಿಸಲಾದ ಭೇಟಿಗೆ ಆಗಮಿಸುವ ಇಲಾಖೆ ಮುಖ್ಯಸ್ಥರು, ಸಿಬ್ಬಂದಿ ಹಾಗೂ ಸಾರ್ವಜನಿಕರು ಕಡ್ಡಾಯವಾಗಿ 2ನೆ ಡೋಸ್ ಪಡೆದಿರುವ ಪ್ರಮಾಣ ಪತ್ರವನ್ನು ಹೊಂದಿರಬೇಕು. ಸಾಮಾನ್ಯ ಭೇಟಿಗೆ ಪ್ರವೇಶವನ್ನು ತತ್‍ಕ್ಷಣದಿಂದಲೇ ಜಾರಿಗೆ ಬರುವಂತೆ ನಿರ್ಬಂಧ ಹಾಕಲಾಗಿದೆ. ಇನ್ನು ಸಚಿವಾಲಯದಲ್ಲಿ ಕಾರ್ಯ […]