ಸುವರ್ಣ ವಿಧಾನಸೌಧದಲ್ಲಿ ಕೋವಿಡ್ ಲಸಿಕಾ ಕೇಂದ್ರ ಆರಂಭ

ಬೆಳಗಾವಿ, ಡಿ.26-ಮಹಾಮಾರಿ ಕೋವಿಡ್ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕು ತಡೆಗಟ್ಟುವ ಚಟುವಟಿಕೆಗಳು ಬೀರಿಸುಗೊಂಡಿವೆ. ಕಳೆದೊಂದು ವಾರದಿಂದ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧದಲ್ಲಿ ಕೋವಿಡ್ ಲಸಿಕಾ ಕೇಂದ್ರಗಳನ್ನು ಇಂದಿನಿಂದ ಆರಂಭಿಸಲಾಗಿದೆ. ಸುವರ್ಣಸೌಧದ ಪೂರ್ವದ್ವಾರ, ವಿಧಾನಸಭೆ ಮತ್ತು ವಿಧಾನಪರಿಷತ್ ಮೊಗಸಾಲೆಯಲ್ಲಿ ಕೋವಿಡ್ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ. ವಿಧಾನಸಭೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಪ್ರಕಟಿಸಿದ್ದಂತೆ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, ಶಾಸಕರು, ಅಧಿಕಾರಿಗಳು, ಇತರೆ ಸಿಬ್ಬಂದಿ ಮತ್ತು ಮಾಧ್ಯಮವರಿಗೂ ಉಚಿತವಾಗಿ ಲಸಿಕೆ […]
ನ.7ರಿಂದ ಡಿ.7ರವರೆಗೆ ಕಾಲುಬಾಯಿ ಲಸಿಕೆ ಅಭಿಯಾನ

ಬೆಂಗಳೂರು,ನ.7- ಜಾನುವಾರುಗಳಲ್ಲಿ ಕಂಡು ಬರುವ ಕಾಲುಬಾಯಿ ರೋಗದ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರುಗಳ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ನವೆಂಬರ್ 7ರಿಂದ ಡಿಸೆಂಬರ್ 7ರವರೆಗೆ ಒಂದು ತಿಂಗಳ ಕಾಲ ರಾಜ್ಯದಲ್ಲಿ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ತಿಳಿಸಿದ್ದಾರೆ. ರಾಜ್ಯದಾದ್ಯಂತ ಇಂದಿನಿಂದ ಒಂದು ತಿಂಗಳ ಕಾಲ ಎಲ್ಲಾ ತಾಲ್ಲೂಕುಗಳಲ್ಲಿ ಎಲ್ಲಾ ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ಹಾಕಲು ಉದ್ದೇಶಿಸಲಾಗಿದೆ ಎಂದು ಅವರು ಎಂದು ಅವರು ತಿಳಿಸಿದ್ದಾರೆ. ಕೇಂದ್ರ ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಸಾವಿನ ಪ್ರಕರಣ : ಮೂವರು […]