ಸುಳ್ಳು ಜಾಹಿರಾತುಗಳಿಂದ ಕಾನೂನು ಸುವ್ಯವಸ್ಥೆ ಸುಧಾರಿಸಲ್ಲ : ಪ್ರಿಯಾಂಕ ವಾದ್ರಾ

ಲಖ್ನೋ,ಸೆ.15- ಪ್ರತಿದಿನ ಪತ್ರಿಕೆಗಳು ಮತ್ತು ದೂರದರ್ಶನಗಳಲ್ಲಿ ಸುಳ್ಳು ಜಾಹೀರಾತುಗಳನ್ನು ನೀಡುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಸುಧಾರಿಸುವುದಿಲ್ಲ. ಅಷ್ಟಕ್ಕೂ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ಘೋರ ಅಪರಾಧಗಳು ಏಕೆ ಹೆಚ್ಚುತ್ತಿವೆ? ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಯೋಗಿ ಆದಿತ್ಯನಾಥ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಲಖಿಂಪುರ ಖೇರಿಯಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಅಪ್ರಾಪ್ತೆ ಸಹೋದರಿಯ ಮೃತ ದೇಹ ಪತ್ತೆಯಾದ ವರದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ಹೆಣ್ಣುಮಕ್ಕಳ ಮೇಲೆಯೇ ಘೋರ ಅಪರಾಧಗಳು […]