ವೈಕುಂಠ ಏಕಾದಶಿ : ದೇವಾಲಯಗಳಲ್ಲಿ ವಿಶೇಷ ಪೂಜೆ-ಪ್ರಾರ್ಥನೆ

ಬೆಂಗಳೂರು, ಜ.13- ವೈಕುಂಠ ಏಕಾದಶಿ ಪ್ರಯುಕ್ತ ಬೆಂಗಳೂರಿನ ಹಲವಾರು ದೇವಾಲಯಗಳಲ್ಲಿ ವಿಶೇಷ ಪೂಜೆ-ಪ್ರಾರ್ಥನೆಗಳು ನೆರವೇರಿದವು. ವೈಯಾಲಿಕಾವಲ್‍ನ ವೆಂಕಟೇಶ್ವರ ದೇವಾಲಯ, ಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನ, ಇಸ್ಕಾನ್, ದೇವಗಿರಿಯ ದೇವಸ್ಥಾನ, ರಾಜಾಜಿನಗರದ ಕೈಲಾಸ ವೈಕುಂಠ ದೇಗುಲ ಸೇರಿದಂತೆ ನಗರದ ಬಹುತೇಕ ವಿಷ್ಣು ದೇವಾಲಯಗಳಲ್ಲಿ ಇಂದು ವಿಶೇಷ ಪೂಜೆ-ಹೋಮ-ಹವನಾದಿಗಳನ್ನು ಹಮ್ಮಿಕೊಳ್ಳಲಾಗಿತ್ತು. ದೇವರ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಸಾಧಾರಣವಾಗಿ ವೈಕುಂಠ ಏಕಾದಶಿಯಂದು ನಸುಕಿನ ಜಾವವೇ ದೇವಾಲಯದ ದ್ವಾರಗಳನ್ನು ತೆರೆಯಲಾಗುತ್ತದೆ. ಆದರೆ, ಈ ಬಾರಿ ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ರಾತ್ರಿ 10 ರಿಂದ […]