ಪಿ.ವರವರ ರಾವ್‍ಗೆ ಮಧ್ಯಂತರ ಜಾಮೀನು ಮುಂದುವರಿಕೆ

ನವದೆಹಲಿ, ಜು.19- ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ ಪಿ.ವರವರ ರಾವ್ ಅವರು ವೈದ್ಯಕೀಯ ಕಾರಣಗಳಿಗಾಗಿ ನಿಯಮಿತ ಜಾಮೀನು ಕೋರಿ ಸಲ್ಲಿಸಿರುವ ಮನವಿಯ ಮೇರೆಗೆ ಸುಪ್ರಿಂ ಕೋರ್ಟ್ ಮಂಗಳವಾರ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‍ಐಎ) ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠ ಮುಂದಿನ ವಿಚಾರಣೆಗೆ ಆಗಸ್ಟ್ 10ಕ್ಕೆ ಸಮಯ ನಿಗದಿ ಮಾಡಿದೆ. ಪ್ರಸ್ತುತ ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನಿನ ಮೇಲಿರುವ ಅವರು ಜುಲೈ 12 ರಂದು ಶರಣಾಗಬೇಕಿತ್ತು. ಸುಪ್ರಿಂಕೋರ್ಟ್ ನೀಡಿದ್ದ ಮಧ್ಯಂತರ ಜಾಮೀನನ್ನು ಮುಂದಿನ ಆದೇಶದವರೆಗೆ […]