ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ

ಮೈಸೂರು,ಜು.20- ನಗರದ ಚಾಮುಂಡಿ ಬೆಟ್ಟದಲ್ಲಿ ನೆಲೆ ನಿಂತಿರುವ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ಇಂದು ವರ್ಧಂತಿ ಮಹೋತ್ಸವ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಗಳು ನಡೆಯುತ್ತಿವೆ. ದೇವಿಗೆ ಮಹಾನ್ಯಾಸ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಸಹಸ್ರನಾಮಾರ್ಚನೆ ಮತ್ತು ಇತರ ಪೂಜಾ ಕೈಂಕರ್ಯಗಳು ನಡೆದಿವೆ. ಆಷಾಢ ಮಾಸದ ಕೃಷ್ಣಪಕ್ಷದ ಸಪ್ತಮಿ ರೇವತಿ ನಕ್ಷತ್ರದಂದು ವರ್ಧಂತಿ ಇರುವುದರಿಂದ ಇಂದು ಬಹಳ ವಿಶೇಷವಾಗಿತ್ತು. ಸಂಪ್ರದಾಯದಂತೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ನಾಡ ಅದೇವತೆಗೆ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಗಿದೆ. ರಾಜವಂಶಸ್ಥ […]