ಸಿದ್ದರಾಮಯ್ಯ ದಮ್ಮು, ತಾಕತ್ತಿಗೆ ವರ್ತೂರು ಪ್ರಕಾಶ್ ಸವಾಲ್

ಬೆಂಗಳೂರು,ಮಾ.18-ದಮ್ಮು, ತಾಕತ್ತು ಇದ್ದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ರ್ಪಧಿಸಲಿ ಎಂದು ಬಿಜೆಪಿ ಅಭ್ಯರ್ಥಿ ವರ್ತೂರು ಪ್ರಕಾಶ್ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೊಬ್ಬರ ದಮ್ಮು, ತಾಕತ್ತು ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅವರಿಗೆ ದಮ್ಮು, ತಾಕತ್ತು ಇದ್ದರೆ ಸ್ಪರ್ಧೆ ಮಾಡಲಿ. ಕ್ಷೇತ್ರದ ಜನ ಯಾರನ್ನು ಕೈ ಹಿಡಿಯುತ್ತಾರೋ ನೋಡೋಣ ಎಂದು ಸವಾಲು ಎಸೆದರು. ನಾನು ಕೋಲಾರದಿಂದ ಸ್ಪರ್ಧೆ ಮಾಡುವುದು ಬೇಡ ಎಂದರೆ ನನ್ನಂತಹ ಚಿಲ್ಲರೆ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದ್ದರು. ಇದೇ ಚಿಲ್ಲರೆ ವ್ಯಕ್ತಿ […]

ಸಿದ್ದು ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಅಖಾಡಕ್ಕಿಳಿಸಲು ಬಿಜೆಪಿ ಸಜ್ಜು

ಬೆಂಗಳೂರು,ನ.14- ಒಂದು ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರದಿಂದ ಕಣಕ್ಕಿಳಿಯುವುದೇ ಆದರೆ ಬಿಜೆಪಿ ಪ್ರಬಲ ಅಭ್ಯರ್ಥಿಯನ್ನು ಅಖಾಡಕ್ಕಿಳಿಸಲು ಸಜ್ಜಾಗಿದೆ. ಶತಾಯಗತಾಯ 2023ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಕಟ್ಟಿ ಹಾಕಲೇಬೇಕೆಂದು ತೀರ್ಮಾನಿಸಿರುವ ಬಿಜೆಪಿ ಕೋಲಾರದಿಂದ ಮಾಜಿ ಸಚಿವ ವರ್ತೂರು ಪ್ರಕಾಶ್ ಇಲ್ಲವೇ ಪರ್ಯಾಯ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಕೊನೆಯ ಕ್ಷಣದವರೆಗೂ ಅಭ್ಯರ್ಥಿ ಹೆಸರನ್ನು ಬಿಟ್ಟುಕೊಡದ ಬಿಜೆಪಿ ವರ್ತೂರು ಪ್ರಕಾಶ್‍ಗೆ ಈಗಾಗಲೇ ಪಕ್ಷದ ಸಂಘಟನೆ ಹಾಗೂ ಚುನಾವಣೆಗೆ ಬೇಕಾದ ಸಿದ್ದತೆಗಳನ್ನು ಕೈಗೊಳ್ಳುವಂತೆ ಸೂಚಿಸಿದೆ. ಒಂದು ವೇಳೆ […]