ಮೇಕೆದಾಟು ಪಾದಯಾತ್ರೆಗೆ ನಮ್ಮ ಬೆಂಬಲವಿಲ್ಲ : ವಾಟಾಳ್

ರಾಮನಗರ,ಜ.5-ಕಾಂಗ್ರೆಸ್‍ನ ಮೇಕೆದಾಟು ಪಾದಯಾತ್ರೆಗೆ ನಮ್ಮ ಬೆಂಬಲ ಇಲ್ಲವೆಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ. ಮೇಕೆದಾಟು ಯೋಜನೆಗೆ ಆಗ್ರಹಿಸಿ ರಾಮನಗರದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಿದ ನಂತರ ಮಾತನಾಡಿದ ಅವರು, ಕಾಂಗ್ರೆಸ್ ನಡೆಸುವ ಮೇಕೆದಾಟು ಯೋಜನೆಗೆ ನಮ್ಮ ಬೆಂಬಲವಿಲ್ಲ. ಮೇಕೆದಾಟು ಯೋಜನೆ ಜಾರಿಯಾಗಬೇಕೆಂದು ಕಳೆದ ಹಲವು ವರ್ಷಗಳಿಂದಲೂ ನಾವು ನಿರಂತರವಾಗಿ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರ ಅಕಾರದಲ್ಲಿದ್ದಾಗ ಅವರೇಕೆ ಮೇಕೆದಾಟು ಯೋಜನೆಯನ್ನು ಮಾಡಲಿಲ್ಲ.ಅವರನ್ನು ತಡೆದಿದ್ದವರು ಯಾರು? ಈಗ ರಾಜಕೀಯ ಮಾಡಬೇಕು ಎಂದು ಪಾದಯಾತ್ರೆ […]