ಸುವರ್ಣಸೌಧದ ಮೆಟ್ಟಿಲುಗಳ ಮೇಲೆ ಕಾಂಗ್ರೆಸ್ ಶಾಸಕರು ದಿಢೀರ್ ಪ್ರತಿಭಟನೆ

ಬೆಳಗಾವಿ,ಡಿ.19- ವಿಧಾನ ಮಂಡಲದ ಸಭಾಂಗಣದಲ್ಲಿ ಸ್ವಾತಂತ್ರ ಸೇನಾನಿ ಸಾವರ್ಕರ್ ಭಾವಚಿತ್ರ ಅಳವಡಿಸಿರುವುದನ್ನು ವಿರೋಧಿಸಿ ಹಾಗೂ ವಿವಾದ ರಹಿತವಾದ ಗಣ್ಯ ರಾಷ್ಟ್ರ ನಾಯಕರ ಭಾವಚಿತ್ರಗಳನ್ನು ಅಳವಡಿಸಬೇಕು ಎಂದು ಒತ್ತಾಯಿಸಿ ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸುವರ್ಣಸೌಧದ ಮೆಟ್ಟಿಲುಗಳ ಮೇಲೆ ಕಾಂಗ್ರೆಸ್ ಶಾಸಕರು ದಿಢೀರ್ ಪ್ರತಿಭಟನೆ ನಡೆಸಿದರು. ವಿಧಾನಮಂಡಲದ ಸಭಾಂಗಣದಲ್ಲಿ ಏಕಾಏಕಿ ಸ್ವತಂತ್ರ ಸೇನಾನಿ ಸಾವರ್ಕರ್ ಫೋಟೋ ಅಳವಡಿಸುವುದನ್ನು ಕಾಂಗ್ರೆಸ್ ಪ್ರಬಲವಾಗಿ ವಿರೋಧಿಸಿದೆ. ಜೊತೆಗೆ ಇಂದು ಬೆಳಗ್ಗೆ ಸುವರ್ಣಸೌಧ ಪ್ರವೇಶ ದ್ವಾರದ ಮೆಟ್ಟಿಲುಗಳ ಮೇಲೆ ಕುವೆಂಪು, ನಾರಾಯಣಗುರು, […]

ಕಾಂಗ್ರೆಸ್ ದೇಶದ ಜನರ ಕೆಂಗಣ್ಣಿಗೆ ಗುರಿಯಾಗಿದೆ : ಕಾರಜೋಳ

ಬೆಳಗಾವಿ,ಡಿ.19-ವೀರ್ ಸಾವರ್ಕರ್ ಫೋಟೋ ಅನಾವರಣ ಮಾಡುವುದರಿಂದ ಕಾಂಗ್ರೆಸ್‍ಗೆ ಏನಾ ಗುತ್ತದೆಯೋ ಗೊತ್ತಿಲ್ಲ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವಕರ್ ಈ ದೇಶದ ಗೌರವಾನ್ವಿತ ವ್ಯಕ್ತಿ. ದೇಶಕ್ಕಾಗಿ ಹೋರಾಟ ಮಾಡಿದ ಯಶಸ್ಸು ಅವರಿಗೆ ಸಲ್ಲುತ್ತದೆ. ಕಾಂಗ್ರೆಸ್ ನವರು ಈಗಾಗಲೇ ವಿವೇಚನಾ ರಹಿತವಾದಂತಹ ವಿಚಾರಗಳನ್ನ ಪ್ರಸ್ತಾಪಿಸಿ, ದೇಶದ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಷ್ಟೇ ಅಲ್ಲದೇ, ದೇಶದಲ್ಲಿ ಜನರು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದ್ದಾರೆ. ಈಗಲೂ ಅವರಿಗೆ ಬುದ್ದಿ ಬಂದಿಲ್ಲ ಅಂದರೆ ಜನರೇ ತಿರ್ಮಾನ ಮಾಡುತ್ತಾರೆ ಎಂದರು. […]

ಗಣೇಶನ ಜೊತೆ ಸಾರ್ವಕರ್ ಫೋಟೋ ಇಟ್ಟು ಹಬ್ಬ ಆಚರಣೆಗೆ ಮುಂದಾದ ಸಂಘಟನೆಗಳು

ಬೆಂಗಳೂರು,ಆ.20- ಈಗಾಗಲೇ ಒಂದಿಲ್ಲೊಂದು ವಿವಾದಗಳು ಭುಗಿಲೆದ್ದಿರುವ ಸಂದರ್ಭದಲ್ಲೇ ಈ ಬಾರಿಯ ಗಣೇಶೋತ್ಸವವು ಸಂಘರ್ಷಕ್ಕೆ ಎಡೆ ಮಾಡಿಕೊಡುವ ಸಂಭವವಿದೆ. ಏಕೆಂದರೆ ಹಿಂದೂಪರ ಸಂಘಟನೆಗಳು ಗಣೇಶೋತ್ಸವ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾರ್ವಕರ್ ಭಾವಚಿತ್ರವನ್ನು ಹಳ್ಳಿ ಹಳ್ಳಿಗಳಲ್ಲಿ ಇಡಲು ಮುಂದಾಗಿವೆ. ಹೀಗಾಗಿ ರಾಜ್ಯದಲ್ಲಿ ಮತ್ತೊಂದು ಸುತ್ತಿನ ಗಣೇಶ ಸಂಘರ್ಷ ಭುಗಿಲೇಳುವ ಸಾಧ್ಯತೆಗಳಿವೆ. ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ವೀರ್ ಸಾರ್ವಕರ್ ಭಾವಚಿತ್ರ ಹಾಕಿದ್ದರಿಂದ ಅನ್ಯಕೋಮಿನ ಯುವಕರು ಪ್ರತಿಭಟನೆ ನಡೆಸಿ ದೊಡ್ಡ ರಾದ್ದಂತವನ್ನೇ ಸೃಷ್ಟಿಸಿದ್ದರು. ಗಲಭೆಯಲ್ಲಿ ಓರ್ವ ಯುವಕನಿಗೆ ಚಾಕು ಇರಿಲಾಗಿತ್ತು.ಈಗ […]

BIG NEWS: ಶಿವಮೊಗ್ಗ ಬಳಿಕ ತುಮಕೂರಿನಲ್ಲೂ ಸಾವರ್ಕರ್ ಭಾವಚಿತ್ರ ಹರಿದ ಕಿಡಿಗೇಡಿಗಳು

ತುಮಕೂರು, ಆ.16- ಶಿವಮೊಗ್ಗದಲ್ಲಿ ವೀರ ಸಾವರ್ಕರ್ ಭಾವಚಿತ್ರವನ್ನು ಹರಿದ ಬೆನ್ನಲ್ಲೇ ತುಮಕೂರು ನಗರದಲ್ಲಿಯೂ ವೀರ ಸಾವರ್ಕರ್ ಭಾವಚಿತ್ರವನ್ನು ಕಿಡಿಗೇಡಿಗಳು ಹರಿದು ಹಾಕಿರುವುದು ಆತಂಕಕ್ಕೆ ಕಾರಣವಾಗಿದೆ. ನಗರದ ಎಂಪ್ರೆಸ್ ಶಾಲೆ ಮುಂಭಾಗ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅಳವಡಿಸಲಾಗಿದ್ದ ಫ್ಲೆಕ್ಸ್‍ ಅನ್ನು ಕಿಡಿಗೇಡಿಗಳು ತಡರಾತ್ರಿ ಹರಿದುಹಾಕಿದ್ದು, ನಗರದಲ್ಲಿ ಆತಂಕ ಮನೆ ಮಾಡಿದೆ. ವೀರ ಸಾವರ್ಕರ್ ಭಾವಚಿತ್ರ ಹರಿದಿರುವ ಬೆನ್ನಲ್ಲೇ ನಗರದಲ್ಲಿ ಶಾಂತಿ ಕದಡದಂತೆ ಕ್ರಮ ಕೈಗೊಳ್ಳಲು ಪೊಲೀಸರು ಆಯಕಟ್ಟಿನ ಪ್ರದೇಶಗಳ ಮೇಲೆ ನಿಗಾ ವಹಿಸಿದ್ದಾರೆ.