ಇಂದು ಬಿಜೆಪಿ ಸೇರಲಿದ್ದಾರೆ ಹಿರಿಯ ನಟ ಅನಂತನಾಗ್

ಬೆಂಗಳೂರು,ಫೆ.22- ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್ ಅವರು ಇಂದು ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ತಮ್ಮ ಎರಡನೇ ರಾಜಕೀಯ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಂಜೆ 4.30ಕ್ಕೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸಚಿವ ಮುನಿರತ್ನ, ಡಾ. ಸುಧಾಕರ್ ಹಾಗೂ ಇತರ ನಾಯಕರು ಕಾರ್ಯಕ್ರದಲ್ಲಿ ಹಾಜರಿರಲಿದ್ದಾರೆ. ಮೂಲಗಳ ಪ್ರಕಾರ ಅನಂತನಾಗ್ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರಿನ ಯಾವುದಾದರೊಂದು ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ. […]

ಖ್ಯಾತ ಹಿನ್ನೆಲೆ ಗಾಯಕಿ ವಾಣಿ ಜಯರಾಂ ನಿಧನ

ಬೆಂಗಳೂರು,ಫೆ.4- ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕಿ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾದ ವಾಣಿ ಜಯರಾಂ(78) ಇಂದು ಚೆನ್ನೈನ ನುಂಗಂಬಾಕ್ಕಂನಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇತ್ತೀಚೆಗಷ್ಟೇ ಭಾರತ ಸರ್ಕಾರ ವಾಣಿ ಜಯರಾಂ ಅವರಿಗೆ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ನೀಡಿ ಕೇಂದ್ರ ಸರ್ಕಾರ ಗೌರವಿಸಿದೆ. ಶಾಸ್ತ್ರೀಯ ಸಂಗೀತಗಾರರ ಕುಟುಂಬದಿಂದ ಬಂದ ವಾಣಿ ಜೈರಾಂ ದುರೈಸಾಮಿ ಅಯ್ಯಂಗಾರ್ ಮತ್ತು ಪದ್ಮಾವತಿ ದಂಪತಿಗೆ ಜನಿಸಿದರು. 2021ರಲ್ಲಿ ಹಿನ್ನಲೆ ಗಾಯಕಿಯಾಗಿ ಜೈರಾಮ್ 50 ವರ್ಷಗಳನ್ನು ಪೂರೈಸಿದ್ದಾರೆ. 1971ರಲ್ಲಿ ತೆರೆ ಕಂಡ ಗುಡ್ಡಿ […]

ಬಣ್ಣದ ಲೋಕದ ನಂಟು ಕಳಚಿದ `ಸಾಕ್ಷಾತ್ಕಾರ’ ನಟಿ ಜಮುನಾ

ಹೈದ್ರಾಬಾದ್, ಜ. 27- ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬಹುಭಾಷಾ ನಟಿ ಜಮುನಾ (86) ಇಂದು ಬಣ್ಣದ ಲೋಕದ ನಂಟು ಕಳಚಿಕೊಂಡು ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ತಮ್ಮ ನಿವಾಸದಲ್ಲೇ ಇಂದು ಬೆಳಗ್ಗೆ ನಿಧನರಾದ ಜಮುನಾ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಹೈದ್ರಾಬಾದ್‍ನ ಫಿಲಂ ಚೇಂಬರ್‍ನಲ್ಲಿ ವ್ಯವಸ್ಥೆ ಮಾಡಲಾಗಿತ್ತು, ಚಿತ್ರರಂಗ, ರಾಜಕೀಯ ಗಣ್ಯರು ಹಾಗೂ ಅಪಾರ ಅಭಿಮಾನಿಗಳು ದರ್ಶನ ಪಡೆದು ಕಂಬನಿ ಮಿಡಿದಿದ್ದಾರೆ. ಮೇರು ನಟಿ ಜಮುನಾ ಅವರ ನಿಧನಕ್ಕೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗಮೋಹನ್‍ರೆಡ್ಡಿ, ತೆಲಂಗಾಣದ ಸಿಎಂ […]

ಕನ್ನಡದ ಹೆಸರಾಂತ ನಟ ಲಕ್ಷ್ಮಣ್ ಇನ್ನಿಲ್ಲ

ಬೆಂಗಳೂರು.ಜ.23-ಕನ್ನಡ ಚಿತ್ರರಂಗದಲ್ಲಿ ಪೋಷಕ ಪಾತ್ರದಲ್ಲಿ ಗಮನ ಸೆಳೆದಿದ್ದ ಹಿರಿಯ ನಟ ಲಕ್ಷ್ಮಣ್(74) ಹೃದಯಾಘಾತದಿಂದ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಯಜಮಾನ ಸೂರ್ಯವಂಶ ಸೇರಿದಂತೆ ಹಲವಾರು ಸೂಪರ್ ಹಿಟ್ ಚಿತ್ರಗಳಲ್ಲಿ ನಟ್ಟಿಸಿದ್ದ ಅವರು ಹಾಸ್ಯ-ನೆಗೆಟೀವ್ ರೋಲ್‍ನಲ್ಲೂ ಮಿಂಚಿದ್ದರು . ಕಳೆದ ರಾತ್ರಿ ಲಕ್ಷ್ಮಣ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ನಂತರ ಅವರನ್ನು ಮುಂಜಾನೆ 3.30 ಸುಮಾರಿಗೆ ಮನೆಯವರು ನಾಗರಬಾವಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಇಸಿಜಿ ಮಾಡಿದ ನಂತರ ಚೇತರಿಸಿಕೊಂಡಿದ್ದರು. ಬಳಿಕ ಮನೆಗೆ ಕರೆದುಕೊಂಡು ಬರಲಾಯಿತು ಎಂದು ಮೂಲಗಳು ತಿಳಿಸಿವೆ. […]

ಪಿ.ರಾಮಯ್ಯ ಪರಿಶುದ್ಧ ಪತ್ರಕರ್ತ : ಸಿಎಂ ಗುಣಗಾನ

ಬೆಂಗಳೂರು, ಅ.27- ಹಿರಿಯ ಪತ್ರಕರ್ತ ರಾಮಯ್ಯ ಅವರ ವರದಿ ಹಾಗೂ ಬರಹದಿಂದ ನಾವು ಬಹಳಷ್ಟು ಕಲಿಯಬಹುದು. ಅವರ ಸಾವಿರ ಹೆಜ್ಜೆಗಳಲ್ಲಿ ನಾವು ಎರಡು ಹೆಜ್ಜೆಯನ್ನಾದರೂ ಇಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಹೇಳಿದರು. ಗಾಂಧಿಭವನದಲ್ಲಿಂದು ಅಭಿಮಾನಿ ಪ್ರಕಾಶನ ಹೊರತಂದಿರುವ ನಾನು ಹಿಂದೂ ರಾಮಯ್ಯ ಪುಸ್ತಕ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ರಾಮಯ್ಯ ಅವರ ಕೃತಿಯಲ್ಲಿ ಸಮಾಜ, ರಾಜಕೀಯ ಹಾಗೂ ಜನರ ಬದುಕನ್ನು ಚಿತ್ರಿಸಲಾಗಿದೆ. ರಾಮಯ್ಯ ಅವರ ಮಾರ್ಗದರ್ಶನ ಸಮಾಜಕ್ಕೆ, ಸರ್ಕಾರಕ್ಕೆ ಅವಶ್ಯಕ ಎಂದು ಹೇಳಿದರು. ಎಲ್ಲರ […]

ಎಲ್ಲರ ಪ್ರೀತಿ ವಿಶ್ವಾಸವೇ ನನ್ನ ಆಸ್ತಿ : ಪತ್ರಿಕಾರಂಗದ ಭೀಷ್ಮ ಪಿ.ರಾಮಯ್ಯ

ಬೆಂಗಳೂರು, ಅ.27- ನನ್ನ 45 ವರ್ಷಗಳ ಸುದೀರ್ಘ ಪತ್ರಿಕಾ ವೃತ್ತಿಯಲ್ಲಿ ಸಮಾಜದ ಎಲ್ಲ ವರ್ಗಗಳ ಪ್ರೀತಿ-ವಿಶ್ವಾಸ ಗಳಿಸಿರುವುದೇ ನನ್ನ ದೊಡ್ಡ ಆಸ್ತಿ ಎಂದು ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ ಅವರು ಇಂದಿಲ್ಲಿ ಹೇಳಿದರು. ಗಾಂಧಿಭವನದಲ್ಲಿಂದು ನಾನು ಹಿಂದೂ ರಾಮಯ್ಯ ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಶಾಸಕಾಂಗ, ಕಾರ್ಯಾಂಗ ಮತ್ತು ಪತ್ರಿಕಾ ವಲಯದಲ್ಲಿ ಮರೆಯಲಾರದಂತಹ ಕ್ಷಣಗಳನ್ನು ನಾನು ಸಾಕಷ್ಟು ನೋಡಿದ್ದೇನೆ. ವಿಧಾನಸೌಧದ 4ನೆ ದರ್ಜೆ ನೌಕರನಿಂದ ಹಿಡಿದು ಮುಖ್ಯ ಕಾರ್ಯದರ್ಶಿವರೆಗೂ ಎಲ್ಲರ ಪ್ರೀತಿ-ವಿಶ್ವಾಸ ಗಳಿಸಿದ್ದೇನೆ. ಅದು ನಾನೆಂದೂ ಮರೆಯಲಾರದಂತಹ […]