ಶೀಘ್ರದಲ್ಲೇ ಪಶುವೈದ್ಯಕೀಯ ವಿವಿಯ ಬೋಧಕ-ಬೋಧಕೇತರ ಸಿಬ್ಬಂದಿ ನೇಮಕ

ಬೆಂಗಳೂರು,ಸೆ.17- ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 217 ಬೋಧಕ ಮತ್ತು 220 ಬೋಧಕೇತರ ಸಿಬ್ಬಂದಿಗಳ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಮಂಜೂರಾತಿ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ ಮಾಡಲಾಗುವುದು ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಸ್ವಷ್ಟಪಡಿಸಿದ್ದಾರೆ. ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇದ್ದ 217 ಬೋಧಕ ಮತ್ತು 220 ಬೋಧಕೇತರ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸದರಿ ಪ್ರಸ್ತಾವನೆಗೆ ಅನುಮೋದನೆ ನೀಡಿ, […]