ಮತಾಂತರದ ವಿರುದ್ಧ ಕಠಿಣ ಕಾನೂನು ಜಾರಿಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ನವದೆಹಲಿ, ಜ.7- ದೇಶದಲ್ಲಿ ಮತಾಂತರದ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಹಣ, ಉದ್ಯೋಗ, ಮದುವೆಯ ಆಮಿಷವೊಡ್ಡಿ ಅಮಾಯಕ ಹಿಂದೂಗಳನ್ನು ಮತಾಂತರ ಮಾಡಲಾಗುತ್ತಿದೆ. ಕ್ರಿಶ್ಚಿಯನ್ ಮಿಷನರಿಗಳು ಬಹಳ ಹಿಂದಿನಿಂದಲೂ ಈ ಕೆಲಸ ಮಾಡುತ್ತಿದ್ದು, ಇದರ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ. ಮತಾಂತರದ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಜರುಗಿಸಬೇಕೆಂದು ವಿಎಚ್‍ಪಿ ಪುನರುಚ್ಚಾರ ಮಾಡಿದೆ. ಪಂಜಾಬ್‍ನ ಕೆಲವು ಜಿಲ್ಲೆಗಳಾದ ಅಮೃತ್‍ಸರ, ಗುರುದಾಸನಪುರ, ಫಿರೋಜ್‍ಪುರದಲ್ಲಿ ಕಳೆದೆರಡು ವರ್ಷಗಳಲ್ಲಿ ಮತಾಂತರದ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿ […]