ಕಲ್ಪತರು ನಾಡಿಗೂ ಕಾಲಿಟ್ಟ ಧರ್ಮದಂಗಲ್

ತುಮಕೂರು,ಫೆ.2- ಗುಬ್ಬಿ ಶ್ರೀ ಚನ್ನಬಸವೇಶ್ವರ ಸ್ವಾಮಿ ಜಾತ್ರೆ ಮಹೋತ್ಸವ ಹಿನ್ನೆಲೆಯಲ್ಲಿ ಜಾತ್ರೆಯಲ್ಲಿ ಅನ್ಯಕೋಮಿನವರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ ಪರ ಸಂಘಟನೆಗಳು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದು, ಕರಾವಳಿಯಲ್ಲಿದ್ದ ಧರ್ಮದಂಗಲ್ ಕಲ್ಪತರು ನಾಡಿಗೆ ಕಾಲಿಟ್ಟಿದೆ. ಗುಬ್ಬಿಯಪ್ಪನ ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಮುಜರಾಯಿ ವ್ಯಾಪ್ತಿಗೆ ಒಳಪಟ್ಟ ದೇವಸ್ಥಾನದಲ್ಲಿ ಕಾನೂನಿನಂತೆ ನೂರು ಮೀಟರ್ ವ್ಯಾಪ್ತಿಯೊಳಗೆ ಅನ್ಯ ಧರ್ಮೀಯರಿಗೆ ವ್ಯಾಪಾರ ಮಾಡಲು ಅವಕಾಶ ನೀಡಬಾರದು ಎಂದು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಮನವಿ ಮಾಡಿವೆ. ಫೆ.4ರಂದು ಘೋಷಿತ ಜೆಡಿಎಸ್ ಅಭ್ಯಥಿಗಳ […]
ಕ್ರಿಶ್ಚಿಯನ್‍ಗೆ ಮತಾಂತರಗೊಳ್ಳುವವರ ಮೀಸಲಾತಿ ನಿಲ್ಲಿಸಿ : VHP

ನವದೆಹಲಿ,ಅ.20- ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವ ಹಿಂದೂಗಳಿಗೆ ಮೀಸಲಾತಿಯ ಯೋಜನೆಯನ್ನು ನಿಲ್ಲಿಸುವಂತೆ ವಿಶ್ವ ಹಿಂದೂ ಪರಿಷತ್ ಸಂಘಟನೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಮತಾಂತರ ಮತ್ತು ಬಾಂಗ್ಲಾದೇಶೀಯರ ಅಕ್ರಮ ವಲಸೆಯಿಂದ ಜನಸಂಖ್ಯೆಯಲ್ಲಿ ಏರುಪೇರಾಗುತ್ತಿದೆ.ಮತಾಂತರ ನಿಷೇಧ ಕಾನೂನನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರ ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಪ್ರಯಾಗ್ರಾಜ್‍ನಲ್ಲಿ ನಡೆದ ನಾಲ್ಕು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಮಾರೋಪದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೇಶದ ವಿವಿಧೆಡೆ ಮತಾಂತರದ ಸಂಚು ನಡೆಯುತ್ತಿದೆ. ಈ ಕುರಿತು ಜಾಗೃತಿ […]