ಗಾಲಿ ಕುರ್ಚಿಯಲ್ಲಿ ಬಂದು ಹಕ್ಕು ಚಲಾಯಿಸಿದ ಮನಮೋಹನ್ ಸಿಂಗ್

ನವದೆಹಲಿ,ಆ.6-ಇಂದು ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಗಾಲಿಕುರ್ಚಿಯಲ್ಲಿ ಸಂಸತ್‍ಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು. ಡಾ. ಮನಮೋಹನ್ ಸಿಂಗ್ ಅವರನ್ನು ಕಳೆದ ವರ್ಷ ಕರೋನವೈರಸ್‍ಗೆ ಧನಾತ್ಮಕ ಪರೀಕ್ಷೆ ನಡೆಸಲಾಗಿತ್ತು. ದೇಶಾದ್ಯಂತ ಅವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸಿದ್ದರು. ಪ್ರಧಾನಿಯಾಗಿ ದೇಶವನ್ನು ಮುನ್ನಡೆಸುವ ಮೊದಲು, ಅವರು 1991 ಮತ್ತು 1996ರ ನಡುವೆ ಹಣಕಾಸು ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಇಂದು ಬೆಳಗ್ಗೆ 10 ಗಂಟೆಗೆ ಸಂಸತ್ತಿನಲ್ಲಿ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಮತದಾನ […]

ಉಪರಾಷ್ಟಪತಿ ಚುನಾವಣೆ : ಇಂದು ಮತದಾನ, ಸಂಜೆ 5 ಗಂಟೆಯ ನಂತರ ಮತ ಎಣಿಕೆ

ನವದೆಹಲಿ,ಆ.6- ದೇಶದ 14ನೇ ಉಪರಾಷ್ಟ್ರಪತಿ ಆಯ್ಕೆಗೆ ಇಂದು ಸಂಸತ್ ಭವನದಲ್ಲಿ ಚುನಾವಣೆ ನಡೆದಿದ್ದು, ಸಂಜೆ ವೇಳೆಗೆ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಸಂಸತ್ ಭವನದ ಕೊಠಡಿ ಸಂಖ್ಯೆ 63ರಲ್ಲಿ ಮತದಾನ ನಡೆದಿದೆ. ಬಿಜೆಪಿ ನೇತೃತ್ವದ ಎನ್‍ಡಿಎ ಹಾಗೂ ಮಿತ್ರ ಪಕ್ಷಗಳ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧನ್ಕರ್ ಮತ್ತು ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಕಾಂಗ್ರೆಸ್‍ನ ಹಿರಿಯ ನಾಯಕಿ ಮಾರ್ಗರೇಟ್ ಆಳ್ವಾ ಕಣದಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ […]