ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ದ
ಬೆಂಗಳೂರು,ಫೆ.4- ಈ ವರ್ಷದ ಮಧ್ಯಭಾಗದಲ್ಲಿ ವಿಧಾನಪರಿಷತ್ಗೆ ನಡೆಯಲಿರುವ 4 ಸ್ಥಾನಗಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಗೊಳಿಸಿದೆ. ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಕ್ಕೆ ರಾಜ್ಯ ಬಿಜೆಪಿ ಘಟಕ ಕಳುಹಿಸಿರುವ ಅಭ್ಯರ್ಥಿಗಳ ಪಟ್ಟಿಗೆ ಹೈಕಮಾಂಡ್ ಹಸಿರುನಿಶಾನೆ ತೋರಿದೆ. ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಹಾಲಿ ಸದಸ್ಯ ಅರುಣ್ ಶಹಪುರ್, ವಾಯುವ್ಯ ಪದವೀಧರ ಕ್ಷೇತ್ರದಿಂದ ಹಾಲಿ ಮತ್ತೋರ್ವ ಸದಸ್ಯ ಹನುಮಂತ ನಿರಾಣಿ, ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಮೋಹನ್ ಲಿಂಬಿಕಾಯಿ ಮತ್ತು ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಗೋ. ಮಧುಸೂದನ್ ಅವರಿಗೆ […]