ವಿಧಾನಸೌಧ ಚಲೋ : ಮತ್ತೆ ರಾಜಧಾನಿ ಬೆಂಗಳೂರಿಗೆ ಮುತ್ತಿಗೆ ಹಾಕಿದ ರೈತರು
ಬೆಂಗಳೂರು,ಸೆ.26-ಮತ್ತೆ ರಾಜಧಾನಿಗೆ ರೈತರು ಮುತ್ತಿಗೆ ಹಾಕಿದ್ದಾರೆ.ತಮ್ಮ ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಇಂದು ವಿಧಾನಸೌಧ ಚಲೊ ಹಮ್ಮಿಕೊಂಡಿದೆ.ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿರುವ ಸಹಸ್ರಾರು ರೈತರು ಇಂದು ರೈಲು ನಿಲ್ದಾಣದಿಂದ ವಿಧಾನಸೌಧದವರೆಗೆ ಬೃಹತ್ ರ್ಯಾಲಿ ನಡೆಸಿದರು. ಪ್ರಸಕ್ತ ಸಾಲಿನ ಕಬ್ಬಿನ ಎಫ್ಆರ್ಪಿ ದರ ಕನಿಷ್ಠ 3,500ರೂ ನಿಗದಿಯಾಗಬೇಕು.. ಕೃಷಿ ಪಂಪ್ಸೆಟ್ಗಳಿಗೆ ನೀಡುವ ಉಚಿತ ವಿದ್ಯುತ್ ನಿಲ್ಲಿಸುವ ಹುನ್ನಾರ ಕೈ ಬಿಡಬೇಕು. ವಿದ್ಯುತ್ ಖಾಸಗೀಕರಣ ಕಾಯ್ದೆ ರದ್ದು […]