ನಾಳೆ ಬಿಜೆಪಿ ವಿಜಯಸಂಕಲ್ಪ ರಥಯಾತ್ರೆಗೆ ಚಾಲನೆ

ಬೆಂಗಳೂರು,ಫೆ.28- ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ಕೊಟ್ಟು ವಿಧಾನಸಭಾ ಚುನಾವಣೆಗೆ ರಣಕಹಳೆ ಮೊಳಗಿಸಿದ ಬೆನ್ನಲ್ಲೆ ಬಿಜೆಪಿಯ ವಿಜಯಸಂಕಲ್ಪ ಯಾತ್ರೆ ನಾಳೆಯಿಂದ ಆರಂಭವಾಗಲಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ರಣಕಹಳೆ ಮೊಳಗಿಸಿರುವ ಬಿಜೆಪಿ ರಾಜ್ಯದ ನಾಲ್ಕು ದಿಕ್ಕಿನಿಂದ ರಥಯಾತ್ರೆಗೆ ಸಜ್ಜಾಗಿದೆ. ಅದಕ್ಕಾಗಿ ರಥಗಳು ಸನ್ನದ್ಧಗೊಂಡಿವೆ. ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರಚಾರದ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಾರ್ಚ್ 2ರಂದು ಬೆಳಗಾವಿ ಜಿಲ್ಲೆಯ […]