ಮಾ.1ರಿಂದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ

ಬೆಂಗಳೂರು,ಫೆ.25- ರಾಜ್ಯದಲ್ಲಿ ಮತ್ತೆ ಶತಾಯಗತಾಯ ಅಧಿಕಾರ ಹಿಡಿಯಲೇ ಬೇಕೆಂದು ದೃಢಸಂಕಲ್ಪ ಮಾಡಿರುವ ಬಿಜೆಪಿ ಮಾ.1ರಿಂದ ರಾಜ್ಯದ 224 ಕ್ಷೇತ್ರಗಳಲ್ಲಿ ನಾಲ್ಕು ತಂಡಗಳಾಗಿ ವಿಜಯ ಸಂಕಲ್ಪ ರಥಯಾತ್ರೆ ಮೂಲಕ ಚುನಾವಣೆಗೆ ಅಧಿಕೃತ ರಣಕಹಳೆ ಮೊಳಗಿಸಲಿದೆ. ಮಾ.1ರಿಂದ ಮಾ.22ರವರೆಗೆ ರಾಜ್ಯದ 224 ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಡಿ.ವಿ.ಸದಾನಂದಗೌಡ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನೇತೃತ್ವದಲ್ಲಿ ರಾಜ್ಯದ ಉದ್ದಗಲಕ್ಕೂ ವಿಜಯ […]