ಸಿರ್ಸಿ ವೃತ್ತದಿಂದ ವಿಜಯನಗರ ಪೈಪ್‍ಲೈನ್‍ವರೆಗೆ ರಸ್ತೆ ಅಗಲೀಕರಣ

ಬೆಂಗಳೂರು,ಡಿ.5- ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಪಾದರಾಯನಪುರ ರಸ್ತೆ ಅಗಲೀಕರಣದ ಕಾಮಗಾರಿಯನ್ನು ಶೀಘ್ರವೇ ಮುಗಿಸಿ ಸಾರ್ವಜನಿಕ ಸೇವೆಗೆ ಲೋಕಾರ್ಪಣೆ ಮಾಡಲಿದ್ದೇವೆ ಎಂದು ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆ ಅಗಲೀಕರಣದ ಸಂಬಂಧ ಸ್ಥಳೀಯ ಶಾಸಕರಾಗಿರುವ ಜಮ್ಮೀರ್ ಅಹಮ್ಮದ್ ಹಾಗೂ ಪಾಲಿಕೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗಿದೆ. ಕೆಲವು ಸಣ್ಣಪುಟ್ಟ ಸಮಸ್ಯೆಗಳಿದ್ದವು, ಈಗ ಎಲ್ಲವೂ ಬಗೆಹರಿಯಲಿದ್ದು, ಶೀಘ್ರವಾಗಿ ಕಾಮಗಾರಿ ಮುಗಿಸಿ ಸಾರ್ವಜನಿಕ ಸೇವೆಗೆ ಲೋಕರ್ಪಾಣೆಗೊಳಿಸಲಾಗುವುದು ಎಂದರು. ಒಂದಿಲ್ಲೊಂದು ಕಾರಣದಿಂದ ಮುಂದೂಡಲೇ ಬಂದಿತು. […]

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬೈಕ್, 8 ಮೊಬೈಲ್‍ ವಶ

ಬೆಂಗಳೂರು,ನ.14- ಮೊಬೈಲ್‍ನಲ್ಲಿ ಮಾತನಾಡುತ್ತಾ ನಡೆದು ಹೋಗುತ್ತಿದ್ದ ವೈದ್ಯರೊಬ್ಬರ ಕೈಯಿಂದ ಮೊಬೈಲ್ ಎಗರಿಸಿ ಇಬ್ಬರು ದರೋಡೆಕೋರರು ಪರಾರಿಯಾಗಿರುವ ಘಟನೆ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅತ್ತಿಗುಪ್ಪೆ ಮೆಟ್ರೊ ನಿಲ್ದಾಣದ ಬಳಿ ನಿನ್ನೆ ಸಂಜೆ ವೈದ್ಯರೊಬ್ಬರು ನಡೆದು ಹೋಗುತ್ತಿದ್ದಾಗ ಅವರ ಮೊಬೈಲ್‍ಗೆ ಕರೆಯೊಂದು ಬಂದಿದೆ. ಕರೆ ಸ್ವೀಕರಿಸಿ ಮಾತನಾಡಿಕೊಂಡು ಹೋಗುತ್ತಿದ್ದರು. ಆಗ ವೈದ್ಯರನ್ನು ಇಬ್ಬರು ದರೋಡೆಕೋರರು ಬೈಕ್‍ನಲ್ಲಿ ಹಿಂಬಾಲಿಸಿಕೊಂಡು ಹೋಗಿ ಮೊಬೈಲ್ ಎಗರಿಸಿ ಪರಾರಿಯಾದರು. ತಕ್ಷಣ ವೈದ್ಯರು ಸಹಾಯಕ್ಕಾಗಿ ಕೂಗಿಕೊಂಡಿದ್ದು, ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ವಿಜಯನಗರ ಠಾಣೆ ಪೊಲೀಸರು […]