ಗ್ರಾಮಲೆಕ್ಕಿಗ ಇನ್ಮುಂದೆ ಗ್ರಾಮ ಆಡಳಿತ ಅಧಿಕಾರಿ : ಸರ್ಕಾರ ಅಧಿಕೃತ ಆದೇಶ

ಬೆಂಗಳೂರು,ಫೆ.26- ಕರ್ನಾಟಕ ಸರ್ಕಾರ ಕಂದಾಯ ಇಲಾಖೆಯಲ್ಲಿನ ಗ್ರಾಮಲೆಕ್ಕಿಗ ಹುದ್ದೆಯನ್ನು ಗ್ರಾಮ ಆಡಳಿತ ಅಧಿಕಾರಿ ಎಂದು ಪುನರ್ ಪದನಾಮೀಕರಿಸುವ ಕುರಿತು ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತು ಕರ್ನಾಟಕ ರಾಜ್ಯಪತ್ರದಲ್ಲಿಯೂ ಆದೇಶಿಸಲಾಗಿದೆ. ಹುದ್ದೆಯ ಪದನಾಮ ಮಾತ್ರ ಬದಲಾವಣೆಯಾಗಿದೆ. ನೇಮಕಾತಿ ವಿಧಾನ ಮತ್ತು ವೇತನ ಶ್ರೇಣಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ರಾಜ್ಯಪತ್ರದಲ್ಲಿ ಸ್ಪಷ್ಟಪಡಿಸಲಾಗಿದೆ. ಕಂದಾಯ ಸಚಿವರ ಟಿಪ್ಪಣಿ, ಪ್ರಾದೇಶಿಕ ಆಯುಕ್ತರು ಬೆಂಗಳೂರು, ಮೈಸೂರು, ಬೆಳಗಾವಿ ಮತ್ತು ಕಲಬುರಗಿ ವಿಭಾಗ ಇವರ 14-10-2022ರ ಪತ್ರ ಸಂಖ್ಯೆಯ ಅನ್ವಯ ಗ್ರಾಮಲೆಕ್ಕಿಗ ಹುದ್ದೆಯನ್ನು […]