ಪತ್ನಿ ಮೇಲೆ ಹಲ್ಲೆ ಮಾಡಿದ ಕ್ರಿಕೆಟರ್ ವಿನೋದ್ ಕಾಂಬ್ಳಿ

ಮುಂಬೈ,ಫೆ.5- ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಅವರ ಬಾಲ್ಯ ಸ್ನೇಹಿತ ವಿನೋದ್ ಕಾಂಬ್ಳಿ ಅವರು ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಕುಡಿದ ಮತ್ತಿನಲ್ಲಿ ಅವರು ಪತ್ನಿ ಆಂಡ್ರಿಯಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಕುರಿತಂತೆ ಆಂಡ್ರಿಯಾ ಪೊಲೀಸರಿಗೆ ದೂರು ನೀಡಿದ್ದು, ಕಾಂಬ್ಳಿ ವಿರುದ್ಧ ಬಾಂದ್ರಾ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಕುಡಿದ ಮತ್ತಿನಲ್ಲಿ ಕಾಂಬ್ಳಿ ನನ್ನ ಮೇಲೆ ಅಡುಗೆ ಪ್ಯಾನ್ ಎಸೆದರು ಅದರಿಂದ ನನ್ನ ತಲೆಗೆ ತೀವ್ರ ಪೆಟ್ಟಾಗಿದೆ […]