ನಿಯಮಗಳನ್ನು ಗಾಳಿಗೆ ತೋರಿ ಪಾದಯಾತ್ರೆ, ರಾಜ್ಯದಲ್ಲಿ ಮತ್ತಷ್ಟು ಕೊರೊನಾ ಹೆಚ್ಚಾಗುವ ಸಾಧ್ಯತೆ

ಬೆಂಗಳೂರು,ಜ.10- ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಗೆ ಭಾರೀ ಪ್ರಮಾಣದಲ್ಲಿ ಜನರು ಸೇರುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವ ಅವರು, ಇದಕ್ಕೆ ಏನಾದರೊಂದು ಪರಿಹಾರ ಕಂಡುಕೊಳ್ಳಬೇಕೆಂದು ಸಲಹೆ ಮಾಡಿದ್ದಾರೆ. ನಿನ್ನೆ ನಡೆದ ಮೊದಲ ದಿನದ ಪಾದಯಾತ್ರೆಯಲ್ಲಿ ಸರಿಸುಮಾರು 5ರಿಂದ 6 ಸಾವಿರ ಜನರು ಸೇರಿದ್ದರು. […]