ಜಮಖಂಡಿಯಲ್ಲಿ ಫೆ.13 ರಂದು ವಿರಾಟ್ ರೈತ ಸಮಾವೇಶ

ಬೆಂಗಳೂರು : ರಾಜ್ಯದ ಪಂಚಮಸಾಲಿ ಸಮುದಾಯದ ಸಂಘಟನೆಯ ನೊಗಕ್ಕೆ ಹೆಗಲಾಗಲು ಜಮಖಂಡಿಯ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ಫೆ.13ರಂದು ಉದಯವಾಗಲಿದೆ ಎಂದು ಹರಕ್ಷೇತ್ರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ಹರಿಹರದ ಯೋಗ ಸಿಂಹಾಸನಾೀಧಿಶ್ವರ ಜಗದ್ಗುರುಗಳಾದ ಶ್ರೀ ವಚನಾನಂದ ಮಹಾಸ್ವಾಮೀಜಿಗಳು ಹೇಳಿದರು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸುಮಾರು ಒಂದೂವರೆ ದಶಕಗಳ ನಂತರ ಉತ್ತರ ಕರ್ನಾಟಕದ ಹೆಬ್ಬಾಗಿಲು ಎಂದೇ ಪ್ರಸಿದ್ದಿಯಾಗಿರುವ ಬಾಗಲಕೋಟೆಯ ಜಮಖಂಡಿಯಲ್ಲಿ ಇನ್ನೊಂದು ಪೀಠದ ಉದಯವಾಗುತ್ತಿದೆ ಎಂದರು. ಅನ್ನ, ಅಕ್ಷರ, ಆರೋಗ್ಯದಂತಹ ತ್ರಿವಿಧ ದಾಸೋಹದ ಕಲ್ಪನೆಯಿಂಧ […]