ನ್ಯಾಯಾಲಯದ ತೀರ್ಪು ನಮ್ಮ ಮುಂದಿರುವ ಏಕೈಕ ಪರಿಹಾರ : ಕಾಗೇರಿ

ಬೆಂಗಳೂರು.ಫೆ.12- ಶಾಲಾ ಕೊಠಡಿಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವ ವಿಷಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆದಿದೆ. ನ್ಯಾಯಾಲಯ ಏನು ತೀರ್ಪು ಕೊಡುತ್ತದೆಯೋ ಅದನ್ನು ಎಲ್ಲರೂ ಪಾಲನೆ ಮಾಡುವುದೇ ನಮ್ಮ ಮುಂದಿರುವ ಏಕೈಕ ಪರಿಹಾರ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಇದರ ಬಗ್ಗೆ ಪರ, ವಿರೋಧ ಹೇಳಿಕೆಗಳು ಬಂದಿದ್ದರಿಂದ ರಾಷ್ಟ್ರ ಮಟ್ಟದಿಂದ ಹಿಡಿದು ಅಂತಾರಾಷ್ಟ್ರೀಯ ಮಟ್ಟದಲ್ಲೂ ಸುದ್ದಿಯಾಗಿದೆ. ರಾಜ್ಯ ಉಚ್ಛ ನ್ಯಾಯಾಲಯ ನೀಡಿರುವ ಮಧ್ಯಂತರ ತೀರ್ಪಿನಂತೆ ನಾವು ನಡೆದುಕೊಳ್ಳೋಣ ಎಂದು […]