ಬ್ರಿಟೀಷ್ ಮನಸ್ಥಿತಿಯಲ್ಲಿರುವ ಅಧಿಕಾರಿಗಳು : ಚಾಟಿ ಬೀಸಿದ ಕಾಗೇರಿ

ಬೆಂಗಳೂರು, ಫೆ.14- ಕುಡಿಯುವ ನೀರು ಯೋಜನೆಯನ್ನು ವಿಳಂಬ ಮಾಡುತ್ತಿರುವ ಅಧಿಕಾರಿಗಳು ಇನ್ನೂ ಬ್ರಿಟಿಷ್ ಆಡಳಿತ ವ್ಯವಸ್ಥೆಯ ಮನಸ್ಥಿತಿಯಲ್ಲಿದ್ದಾರೆ ಎಂದು ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಚಾಟಿ ಬೀಸಿದ ಪ್ರಸಂಗ ವಿಧಾನಸಭೆಯಲ್ಲಿಂದು ಜರುಗಿತು. ಪ್ರಶ್ನೋತ್ತರ ಅವಯಲ್ಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಗಾಮನಹಳ್ಳಿ ಹಾಗೂ ಇತರೆ 16 ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆ ಮಂಜೂರಾಗಿದ್ದರೂ ಯೋಜನೆ ವಿಳಂಬವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ವೇಳೆ ಮಧ್ಯೆ ಪ್ರವೇಶಿಸಿದ ಸಭಾಧ್ಯಕ್ಷರು, ನಮ್ಮ ಅಧಿಕಾರಿಗಳು ಈಗಲೂ […]