ಮಾಂಸ ತಿಂದು ದೇವಸ್ಥಾನಕ್ಕೆ ಬಂದ ಸಿದ್ದರಾಮಯ್ಯ, ಮತ್ತೊಂದು ವಿವಾದ

ಬೆಂಗಳೂರು,ಆ.21- ಮಾಂಸಹಾರ ಸೇವಿಸಿ ಸಿದ್ದರಾಮಯ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂಬ ಮತ್ತೊಂದು ವಿವಾದ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ಮಡಿಕೇರಿಗೆ ನೆರೆ ಸಂಕಷ್ಟಗಳನ್ನು ವೀಕ್ಷಿಸಲು ಸಿದ್ದರಾಮಯ್ಯ ಭೇಟಿ ನೀಡಿದ್ದರು. ಆ ವೇಳೆ ವಿಧಾನಪರಿಷತ್‍ನ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ಅವರ ಮನೆಯಲ್ಲಿ ಸಿದ್ದರಾಮಯ್ಯ ಮತ್ತು ಇತರ ಮುಖಂಡರು ಊಟ ಮಾಡಿದ್ದರು. ಸಂಜೆ ಕೊಡ್ಲಿಪೇಟೆಯ ಬಸವೇಶ್ವರ ದೇವಸ್ಥಾನಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಮಾಂಸಾಹಾರ ಊಟ ಮಾಡಿ ಸಿದ್ದರಾಮಯ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಇದು ತೀವ್ರ ಚರ್ಚೆಗೂ ಗ್ರಾಸವಾಗಿದೆ. […]