ಮೀಸಲಾತಿ ಹೆಚ್ಚಳಕ್ಕಾಗಿ ಒಕ್ಕಲಿಗರ ಹೋರಾಟ

ಬೆಂಗಳೂರು,ನ.27- ಒಕ್ಕಲಿಗರ ಮೀಸಲಾತಿ ಪ್ರಮಾಣವನ್ನು ಶೇ.12ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ಮನವಿ ಮಾಡುವುದು, ನಿಗದಿತ ಗಡುವಿನೊಳಗೆ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಹೊರಡಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡಲು ಇಂದು ನಡೆದ ಒಕ್ಕಲಿಗ ಸಮುದಾಯದ ಪ್ರಮುಖರ ಸಭೆಯಲ್ಲಿ ತೀರ್ಮಾನಿಸಲಾಯಿತು. ರಾಜ್ಯ ಒಕ್ಕಲಿಗರ ಸಂಘದ ನೇತೃತ್ವದಲ್ಲಿಂದು ಕುವೆಂಪು ಕಲಾಕ್ಷೇತ್ರದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ , ಪಟ್ನಾಯಕನಹಳ್ಳಿ ಮಠದ ಶ್ರೀ ನಂಜಾವಧೂತ ಮಹಾಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಮಠದ ಶ್ರೀಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ಜರುಗಿದ ಒಕ್ಕಲಿಗ […]

ಒಕ್ಕಲಿಗರ ಮೀಸಲಾತಿ ಹೆಚ್ಚಳಕ್ಕಾಗಿ ಪಕ್ಷಾತೀತ ಹೋರಾಟಕ್ಕೆ ಸಜ್ಜು

ಬೆಂಗಳೂರು, ನ.26- ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವಂತೆ ರಾಜ್ಯ ಸರ್ಕಾರನ್ನು ಆಗ್ರಹಿಸಿ ಪಕ್ಷಾತೀತ ಹೋರಾಟ ನಡೆಸಲು ಒಕ್ಕಲಿಗ ಸಮು ದಾಯ ಸಜ್ಜಾಗಿದ್ದು, ಹೋರಾಟದ ರೂಪುರೇಷೆ ಬಗ್ಗೆ ನಾಳೆ ಮಹತ್ವದ ಸಭೆ ನಡೆಯಲಿದೆ. ರಾಜ್ಯ ಒಕ್ಕಲಿಗರ ಸಂಘದ ಆವರಣದಲ್ಲಿರುವ ಕುವೆಂಪು ಕಲಾಕ್ಷೇತ್ರದಲ್ಲಿ ಬೆಳಿಗ್ಗೆ 10.30 ಗಂಟೆಗೆ ಒಕ್ಕಲಿಗರ ಮೀಸಲಾತಿ ಹೆಚ್ಚಿಸುವ ಹೋರಾಟದ ಕುರಿತ ಒಕ್ಕಲಿಗ ಸಮುದಾಯದ ಪ್ರಮುಖರ ಸಭೆಯನ್ನು ಕರೆಯಲಾಗಿದೆ. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಪಟ್ಟನಾಯಕನಹಳ್ಳಿ ಮಠದ ಶ್ರೀ ನಂಜಾವಧೂತ ಮಹಾಸ್ವಾಮೀಜಿ ಮತ್ತು […]

ಒಕ್ಕಲಿಗರ ಮೀಸಲಾತಿ ಶೇ.12ರಷ್ಟು ಹೆಚ್ಚಿಸಲು ಸಿಎಂಗೆ ಮನವಿ

ಬೆಂಗಳೂರು,ಅ.12- ಒಕ್ಕಲಿಗ ಸಮುದಾಯಕ್ಕೂ ಮೀಸಲಾತಿ ಪ್ರಮಾಣವನ್ನು ಶೇ.12ರಷ್ಟು ಹೆಚ್ಚಳ ಮಾಡಬೇಕೆಂದು ಒಕ್ಕಲಿಗ ಮಹಾಸಭಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದೆ. ಈ ಸಂಬಂಧ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿರುವ ಒಕ್ಕಲಿಗ ಮಹಾಸಭಾ, 2ನೇ ಅತಿದೊಡ್ಡ ಸಮುದಾಯವಾಗಿರುವ ಒಕ್ಕಲಿಗರಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಬೇಕೆಂದು ಪತ್ರದಲ್ಲಿ ಮನವಿ ಮಾಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ ಮೀಸಲಾತಿ ಹೆಚ್ಚಳ ಮಾಡಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ […]

ಲಿಂಗಾಯತ-ಒಕ್ಕಲಿಗ ಸಮುದಾಯ ಓಲೈಕೆಗೆ ಕಸರತ್ತು

ಬೆಂಗಳೂರು,ಆ.24- ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಬಿಜೆಪಿ ಸರ್ಕಾರ ವಿಧಾನಸೌಧದ ಆವರಣದಲ್ಲಿ ದಾರ್ಶನಿಕ ಬಸವಣ್ಣ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪಿಸುವ ಮೂಲಕ ರಾಜ್ಯದ ಎರಡು ದೊಡ್ಡ ಸಮುದಾಯಗಳಾದ ಲಿಂಗಾಯತ ಮತ್ತು ಒಕ್ಕಲಿಗರನ್ನು ಓಲೈಸಲು ಪ್ರಯತ್ನಿಸುತ್ತಿದೆ. ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ 1ರಂದು ಪ್ರತಿಮೆಗಳು ಅನಾವರಣಗೊಳ್ಳುವ ನಿರೀಕ್ಷೆಯಿದೆ. ವಿಧಾನಸೌಧದ ಆವರಣದಲ್ಲಿ ಈಗಾಗಲೇ ಡಾ.ಬಿ.ಆರ್.ಅಂಬೇಡ್ಕರ್, ಕೆಂಗಲ್ ಹನುಮಂತಯ್ಯ, ಮಹಾತ್ಮ ಗಾಂಧಿ ಮತ್ತಿತರರ ಪ್ರತಿಮೆಗಳಿವೆ.2021ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಯಾಗಿದ್ದಾಗ ವಿಧಾನಸೌಧದಲ್ಲಿ ಬಸವಣ್ಣ ಪ್ರತಿಮೆ ಸ್ಥಾಪನೆಗೆ ಸಚಿವ […]

ಎಲೆಕ್ಷನ್ ತಯಾರಿ, ಒಕ್ಕಲಿಗ-ಲಿಂಗಾಯಿತ ಕಾಂಬಿನೇಷನ್‍ನಲ್ಲಿ ಬಿಜೆಪಿ ಟೀಮ್ ತಂಡ ರಚನೆ

ಬೆಂಗಳೂರು,ಆ.5- ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಪಕ್ಷದ ಸಂಘಟನೆಯತ್ತ ಗಮನಹರಿಸಿರುವ ಬಿಜೆಪಿ ಲಿಂಗಾಯಿತ- ಒಕ್ಕಲಿಗ ಕಾಂಬಿನೇಷನ್‍ನಲ್ಲಿ ಹೊಸ ತಂಡ ಕಟ್ಟಲು ಮುಂದಾಗಿದೆ. ಒಂದು ದಿನದ ಭೇಟಿಗಾಗಿ ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಹಾಲಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರನ್ನು ಬದಲಾಯಿಸಿ ಒಕ್ಕಲಿಗ, ದಲಿತ ಇಲ್ಲವೇ ಹಿಂದುಳಿದ ವರ್ಗದ ಸಮುದಾಯಕ್ಕೆ ಸೇರಿದವರನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಿಸಬೇಕೆಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲಿಂಗಾಯಿತ ಸಮುದಾಯಕ್ಕೆ ಸೇರಿದರೆ, 2ನೇ ಅತಿದೊಡ್ಡ ಸಮುದಾಯವಾದ […]