ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಶಾಸಕ ಸಿ.ಎನ್.ಬಾಲಕೃಷ್ಣ ಆಯ್ಕೆ

ಬೆಂಗಳೂರು,ಜ.5-ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಶಾಸಕ ಸಿ.ಎನ್.ಬಾಲಕೃಷ್ಣ , ಪ್ರಧಾನ ಕಾರ್ಯದರ್ಶಿಯಾಗಿ ಟಿ.ಕೋನಪ್ಪ ರೆಡ್ಡಿ ಆಯ್ಕೆಯಾಗಿದ್ದಾರೆ. ಇಂದು ಸಂಘದ ಪದಾಧಿಕಾರಿಗಳ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಾಲಕೃಷ್ಣ ಹಾಗೂ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಟಿ.ಕೋನಪ್ಪ ರೆಡ್ಡಿ ಅವರಿಗೆ ತಲಾ 20 ಮತಗಳು ದೊರೆತು ಚುನಾಯಿತರಾಗಿದ್ದಾರೆ. ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಫರ್ಧಿಸಿದ್ದ ಸಂಘದ ಮಾಜಿ ಅಧ್ಯಕ್ಷ ಬಿ. ಕೆಂಚಪ್ಪ ಗೌಡ 14 ಮತ ಪಡೆದು ಪರಾಜಿತಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಡಾ.ಕೆ.ವಿ.ರೇಣುಕಾಪ್ರಸಾದ್, ಹನುಮಂತಯ್ಯ, […]