ನಾಳೆ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಚುನಾವಣೆ

ಬೆಂಗಳೂರು, ಜ.4- ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರು ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ನಾಳೆ ತೆರೆ ಬೀಳಲಿದೆ. ಸಂಘದ ಪದಾಧಿಕಾರಿಗಳ ಆಯ್ಕೆಗೆ ನಾಳೆ ಚುನಾವಣೆ ನಡೆಯಲಿದ್ದು, ಅಧ್ಯಕ್ಷ ಸ್ಥಾನಕ್ಕೆ ಶಾಸಕ ಸಿ.ಎನ್.ಬಾಲಕೃಷ್ಣ ಹಾಗೂ ಸಂಘದ ಮಾಜಿ ಅಧ್ಯಕ್ಷ ಬಿ.ಕೆಂಚಪ್ಪಗೌಡ ನಡುವೆ ತೀವ್ರ ಪೈvಟಿ ಏರ್ಪಟ್ಟಿದೆ. ನಾಳೆ ನಡೆಯುವ ಪದಾಕಾರಿಗಳ ಚುನಾವಣೆಯಲ್ಲಿ ಕೆಂಚಪ್ಪಗೌಡ ಮತ್ತು ಬಾಲಕೃಷ್ಣ ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಲಿದ್ದು, ಅದೇ ರೀತಿ ಉಳಿದ ಪದಾಧಿಕಾರಿಗಳ ಸ್ಥಾನಕ್ಕೂ ತಮ್ಮ ತಮ್ಮ ಬೆಂಬಲಿಗರನ್ನು ಕಣಕ್ಕಿಳಿಸಲಿದ್ದಾರೆ. ಎರಡು ಪ್ರತ್ಯೇಕ ಬಣಗಳಾಗಿದ್ದು, […]